ಧಾರವಾಡ, 12 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಧಾರವಾಡ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಅಕ್ಟೋಬರ್ 23 ರಂದು, ಕಿತ್ತೂರು ರಾಣಿ ಚನ್ನಮ್ಮ ಜಯಂತಿಯನ್ನು ಆಚರಿಸುವ ಹಿನ್ನಲೆಯಲ್ಲಿ ಜಯಂತಿಯ ಪೂರ್ವಭಾವಿ ಸಭೆಯನ್ನು ಅಕ್ಟೋಬರ್ 14, 2025 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಸದರಿ ಸಭೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಮಾಜದ ಮುಖಂಡರು ಭಾಗವಹಿಸಿ ಸಲಹೆ, ಸೂಚನೆ ನೀಡಲು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa