ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ ಪ್ರಾರಂಭ
ಚಿತ್ರದುರ್ಗ, 12 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆಯನ್ನು ಚಿತ್ರದುರ್ಗ ಜಿಲ್ಲೆಯಾದ್ಯಂತ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗಳಲ್ಲಿ ನಡೆಸಲಾಗುತ್ತಿದ್ದು, ಈ ಸಂಬಂಧ ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರಿ ಆದೇಶದನ್ವಯ 45 ಕೆಲಸದ ದಿನಗಳ ಅ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ ಪ್ರಾರಂಭ


ಚಿತ್ರದುರ್ಗ, 12 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆಯನ್ನು ಚಿತ್ರದುರ್ಗ ಜಿಲ್ಲೆಯಾದ್ಯಂತ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗಳಲ್ಲಿ ನಡೆಸಲಾಗುತ್ತಿದ್ದು, ಈ ಸಂಬಂಧ ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಸರ್ಕಾರಿ ಆದೇಶದನ್ವಯ 45 ಕೆಲಸದ ದಿನಗಳ ಅವಧಿಯಲ್ಲಿ ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಲಬೇಕಿರುತ್ತದೆ. ಈ ಸಮೀಕ್ಷೆಯಲ್ಲಿ ಭಾಗವಹಿಸಲು ಬಯಸುವ ದೇವದಾಸಿ ಮಹಿಳೆಯರು ಮತ್ತು ಕುಟುಂಬಗಳಿಂದ ನಿಗದಿತ ನಮೂನೆಗಳಲ್ಲಿ ಅರ್ಜಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ ಅದೇ ಕಚೇರಿಗೆ ಸಲ್ಲಿಸಲು ಸೂಚಿಸಿದೆ.

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆಗೆ ಮೂರು ರೀತಿಯ ಅರ್ಜಿ ನಮೂನೆಗಳನ್ನು ನಿಗದಿಪಡಿಸಲಾಗಿದೆ. ನಮೂನೆ-1 ಈಗಾಗಲೇ ಸರ್ಕಾರದಿಂದ 1993-94 ಮತ್ತು 2007-08 ನೇ ಸಾಲುಗಳಲ್ಲಿ ನಡೆಸಲಾದ ಸಮೀಕ್ಷೆಯಲ್ಲಿ ಹೆಸರು ನೊಂದಣಿಯಾಗಿದ್ದು, ಮರಣ ಹೊಂದಿರುವ ಮಹಿಳೆಯ ಕುಟುಂಬದ ಅಧಿಕೃತ ಸದಸ್ಯರು ಭರ್ತಿ ಮಾಡಿ ಕೊಡಬೇಕಾದ ಅರ್ಜಿ ನಮೂನೆ-1 ರಲ್ಲಿ ಸಲ್ಲಿಸಬೇಕು.

ನಮೂನೆ-2 ಈ ಹಿಂದೆ 1993-94 ಮತ್ತು 2007-08ನೇ ಸಾಲುಗಳಲ್ಲಿ ನಡೆಸಲಾದ ಸಮೀಕ್ಷೆಯಲ್ಲಿ ಹೆಸರು ನೊಂದಣಿಯಾಗದೇ ಹೊರಗುಳಿದ, ಹಾಲಿ ಜೀವಂತವಿರುವ ಹೊಸದಾಗಿ ದೇವದಾಸಿ ಪಟ್ಟಿಗೆ ಸೇರ್ಪಡೆಗೊಳ್ಳಲು ಬಯಸುವ ಮಾಜಿ ದೇವದಾಸಿ ಮಹಿಳೆಯರು ಭರ್ತಿ ಮಾಡಿ ಕೊಡಬೇಕಾದ ಅರ್ಜಿ ನಮೂನೆ-2 ರಲ್ಲಿ ಸಲ್ಲಿಸಬೇಕು.

ನಮೂನೆ-3 ಈ ಹಿಂದೆ 1993-94 ಮತ್ತು 2007-08ನೇ ಸಾಲುಗಳಲ್ಲಿ ನಡೆಸಲಾದ ಸಮೀಕ್ಷೆಯಲ್ಲಿ ಹೆಸರು ನೊಂದಣಿಯಾಗದೇ ಹೊರಗುಳಿದ ಮತ್ತು ಪ್ರಸ್ತುತ ಮರಣ ಹೊಂದಿರುವ ಮಹಿಳೆಯರ ಕುಟುಂಬದ ಅಧೀಕೃತ ಸದಸ್ಯರು ಭರ್ತಿ ಮಾಡಿ ಕೊಡಬೇಕಾದ ಅರ್ಜಿ ನಮೂನೆ-3 ರಲ್ಲಿ ಸಲ್ಲಿಸಬೇಕು.

ಹೊಸ ಸೇರ್ಪಡೆ ಬಯಸುವ ಮಹಿಳೆಯರ ವಯಸ್ಸಿನ ದೃಢೀಕರಣ, ವೈದ್ಯಕೀಯ ದೃಢೀಕರಣ ಪತ್ರ, ಶಾಲಾ ದಾಖಲಾತಿ ಪತ್ರ, ಬ್ಯಾಂಕ್ ಪಾಸ್ ಪುಸ್ತಕ, ಪಡಿತರ ಚೀಟಿ, ಜಾತಿ ಆದಾಯ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರಗಳೊಂದಿಗೆ ಅರ್ಜಿಗಳನ್ನು ಸಂಬಂಧಪಟ್ಟ ತಾಲ್ಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಿತ್ರದುರ್ಗ ಇಲ್ಲಿಗೆ ಇದೇ ಅಕ್ಟೋಬರ್ 15ರೊಳಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ದೇವದಾಸಿ ಪುನರ್ವಸತಿ ಯೋಜನೆಯ ಯೋಜನಾಧಿಕಾರಿಗಳು ಮೊಬೈಲ್ ಸಂಖ್ಯೆ 6360991070, ಯೋಜನಾನುಷ್ಟಾನಾಧಿಕಾರಿಗಳು-7259552070, 8105106910, 9900974202 ಹಾಗೂ ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗಳನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande