ಬೀದಿ ನಾಯಿಗಳ ಹಾವಳಿ ಹೆಚ್ಚಳ ; ಮತ್ತೆ ಮಗುವಿನ ಮೇಲೆ ದಾಳಿ
ಗದಗ, 12 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಗದಗ ಬೆಟಗೇರಿ ಅವಳಿ ನಗರದಲ್ಲಿ ಬೀದಿ ನಾಯಿಗಳ ಹಾವಳಿ ತೀವ್ರಗೊಂಡಿದ್ದು, ಜನರಲ್ಲಿ ಭೀತಿಯ ವಾತಾವರಣ ಉಂಟಾಗಿದೆ. ಕಳೆದ ವಾರ ಶಾಲಾ ವಿದ್ಯಾರ್ಥಿನಿ ಮೇಲೆ ದಾಳಿ ನಡೆದಿದ್ದರೆ, ಈ ಬಾರಿ ಮನೆಯಲ್ಲಿ ಆಟವಾಡುತ್ತಿದ್ದ ಪುಟ್ಟ ಮಗುವಿನ ಮೇಲೆಯೂ ಬೀದಿ ನಾಯಿಗಳು ಭೀಕರ ದ
ಪೋಟೋ


ಗದಗ, 12 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಗದಗ ಬೆಟಗೇರಿ ಅವಳಿ ನಗರದಲ್ಲಿ ಬೀದಿ ನಾಯಿಗಳ ಹಾವಳಿ ತೀವ್ರಗೊಂಡಿದ್ದು, ಜನರಲ್ಲಿ ಭೀತಿಯ ವಾತಾವರಣ ಉಂಟಾಗಿದೆ. ಕಳೆದ ವಾರ ಶಾಲಾ ವಿದ್ಯಾರ್ಥಿನಿ ಮೇಲೆ ದಾಳಿ ನಡೆದಿದ್ದರೆ, ಈ ಬಾರಿ ಮನೆಯಲ್ಲಿ ಆಟವಾಡುತ್ತಿದ್ದ ಪುಟ್ಟ ಮಗುವಿನ ಮೇಲೆಯೂ ಬೀದಿ ನಾಯಿಗಳು ಭೀಕರ ದಾಳಿ ನಡೆಸಿವೆ.

ಬೆಟಗೇರಿಯ ಕುರಟ್ಟಿಪೇಟಿ ನಿವಾಸಿ ಮೂರುವರೆ ವರ್ಷದ ವಿಜಯೇಂದ್ರ ಎನ್ನುವ ಮಗುವಿನ ಮೇಲೆ ಬೀದಿನಾಯಿ ದಾಳಿ ನಡೆಸಿದ್ದು, ಸ್ಥಳೀಯರು ತಕ್ಷಣ ರಕ್ಷಣೆ ಮಾಡಿದರೂ ನಾಯಿಯು ಮಗುವಿನ ಬೆನ್ನಿಗೆ ಕಚ್ಚಿದೆ. ತಕ್ಷಣ ಮಗುವನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ನಂತರ ಸ್ಥಳಕ್ಕೆ ಬಂದ ಗದಗ-ಬೆಟಗೇರಿ ನಗರಸಭೆ ಆಯುಕ್ತ ರಾಜಾರಾಮ ಪವಾರ್ ಅವರನ್ನು ಪೋಷಕರು ಮತ್ತು ಸ್ಥಳೀಯರು ತರಾಟೆಗೆ ತೆಗೆದುಕೊಂಡರು. “ನಾಯಿಗಳ ಹಾವಳಿ ಬಗ್ಗೆ ಹಲವು ಬಾರಿ ಮನವಿ ಮಾಡಿದರೂ ಕ್ರಮ ಕೈಗೊಂಡಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ, ಕಳೆದ ವಾರ ಗದಗದ ಪಂಚಾಳ ಪ್ರದೇಶದಲ್ಲಿ ಶಾಲೆಯಿಂದ ಮನೆಗೆ ಬರುತ್ತಿದ್ದ ಶ್ರೇಯಾ ಎನ್ನುವ ಏಳು ವರ್ಷದ ಬಾಲಕಿಯ ಮೇಲೂ ಬೀದಿನಾಯಿಗಳು ಭೀಕರವಾಗು ದಾಳಿ ನಡೆಸಿದ್ದವು. ಆಕೆ ಇನ್ನೂ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ನಗರಸಭೆ ಆಯುಕ್ತ ರಾಜಾರಾಮ ಪವಾರ್ ಪ್ರತಿಕ್ರಿಯೆ ನೀಡುತ್ತಾ, “ಬೀದಿನಾಯಿಗಳನ್ನು ಬೇರೆಡೆ ಸ್ಥಳಾಂತರಿಸಲು ಅವಕಾಶವಿಲ್ಲ. ಈಗಾಗಲೇ ೧,೬೨೨ ನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಕ್ರಮಗಳನ್ನು ಮತ್ತಷ್ಟು ಬಲಪಡಿಸಲಾಗುತ್ತದೆ” ಎಂದು ತಿಳಿಸಿದ್ದಾರೆ.

ನಾಲ್ಕೈದು ತಿಂಗಳ ಒಳಗೆ ಐದಾರು ಮಕ್ಕಳ ಮೇಲೆ ದಾಳಿ ನಡೆದ ಹಿನ್ನೆಲೆಯಲ್ಲಿ ಗದಗ-ಬೆಟಗೇರಿ ಅವಳಿ ನಗರದಲ್ಲಿ ಪೋಷಕರು ಆತಂಕಗೊಂಡಿದ್ದು, ಮಕ್ಕಳು ಮನೆಯ ಹೊರಗೆ ಬರದಂತೆ ಎಚ್ಚರಿಕೆ ವಹಿಸುತ್ತಿದ್ದಾರೆ. ನಾಗರಿಕರು ನಗರಸಭೆಯಿಂದ ತುರ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande