ವಾಲ್ಮೀಕಿ ಮಹಾಕಾವ್ಯ ಎಲ್ಲರಿಗೂ ಆದರ್ಶ
ವಾಲ್ಮೀಕಿ ಮಹಾಕಾವ್ಯ ಎಲ್ಲರಿಗೂ ಆದರ್ಶ
ಕೋಲಾರ ತಾಲ್ಲೂಕಿನ ಅರಾಭಿಕೊತ್ತನೂರು ಗ್ರಾಮ ಪಂಚಾಯಿತಿಯ ಚಿಕ್ಕ ಅಯ್ಯೂರು ಗ್ರಾಮದಲ್ಲಿ ನಡೆದ ವಾಲ್ಮೀಕಿ ಜಯಂತಿಯನ್ನು ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್ ಉದ್ಘಾಟಿಸಿದರು.


ಕೋಲಾರ, ೧೨ ಅಕ್ಟೋಬರ್ (ಹಿ.ಸ) :

ಆ್ಯಂಕರ್ : ವಾಲ್ಮೀಕಿ ಅವರ ಮಹಾಕಾವ್ಯದಲ್ಲಿನ ಆದರ್ಶ ನಮಗೆಲ್ಲ ಸ್ಪೂರ್ತಿಯಾಗಿದ್ದು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ತಿಳಿಸಿದರು.

ಕೋಲಆರ ತಾಲ್ಲೂಕಿನ ಅರಾಭಿಕೊತ್ತನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಅಯ್ಯೂರು ಗ್ರಾಮದಲ್ಲಿ ಭಾನುವಾರ ಮಹರ್ಷಿ ವಾಲ್ಮೀಕಿ ಜಯಂತಿ ಪ್ರಯುಕ್ತ ವಾಲ್ಮೀಕಿ ರವರ ಭಾವಚಿತ್ರವನ್ನು ಅನಾವರಣ ಮಾಡಿ ಮಾತನಾಡಿದ ಅವರು ಮಹರ್ಷಿ ವಾಲ್ಮೀಕಿ ಅವರು ಕೇವಲ ಒಂದು ಸಮಾಜಕ್ಕೆ ಸೀಮಿತರಾದವರಲ್ಲ ಇಡೀ ನಾಡಿಗೆ ಸೀಮಿತವಾದವರು ವಾಲ್ಮೀಕಿ ನಾಯಕ ಸಮಾಜದ ಗುರುಭಕ್ತಿಗಾಗಿ ಏಕಲವ್ಯ, ದೈವ ಭಕ್ತಿ ಬೇಡರಕಣ್ಣಪ್ಪ, ಪ್ರಜೆಗಳಿಧಿಗಾಗಿ ವೀರಮದಕರಿ ನಾಯಕರ ಕೊಡುಗೆ ಅಪಾರವಾಗಿದೆ ಎಂದರು

ರಾಮಾಯಣ ಎಂಬ ಮಹಾಕಾವ್ಯವು ಇವರ ಕವಿತ್ವ ಭಾವನೆಯ ಕೊಡುಗೆಯಾಗಿದೆ. ಭ್ರಾತೃತ್ವ ಭಾವನೆ, ರಾಜನೀತಿ, ಮನೋಧರ್ಮ, ಮಾನವೀಯ ಮೌಲ್ಯ, ಪ್ರಜಾಪ್ರಭುತ್ವ ರಾಮಾಯಣ ಮಹಾಕಾವ್ಯವು ಪರಿಚಯಿಸಿದೆ ವಿಶ್ವಕ್ಕೆ ರಾಮಾಯಣ ಎಂಬ ಅತಿದೊಡ್ಡದಾದ ಕಾವ್ಯವನ್ನು ಕೊಡುಗೆ ನೀಡಿದ್ದಾರೆ. ರಾಮಾಯಣದಲ್ಲಿ ಒಳಗೊಂಡಿರುವ ತತ್ವಾದರ್ಶ ಕೊಡುಗೆ ಅಪಾರವಾಗಿದ್ದು, ಅವರು ನೀಡಿರುವ ಆದರ್ಶ ವಿಚಾರ-ತತ್ವಾದಾರ್ಶಗಳು ನಮ್ಮ ದೇಶ ಮಾತ್ರವಲ್ಲದೇ ಬೇರೆ-ಬೇರೆ ದೇಶಗಳಲ್ಲಿ ಪ್ರಚಲಿತದಲ್ಲಿವೆ. ಲವ-ಕುಶರಿಗೆ ಗುರುವಾಗಿದ್ದವರು ವಾಲ್ಮೀಕಿ. ಅವರ ತತ್ವಗಳನ್ನು ಜೀವನದಲ್ಲಿ ಪಾಲನೆ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ವೈ. ಶಿವಕುಮಾರ್, ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರುಳಿ, ಚಿಕ್ಕ ಅಯ್ಯೂರು ರವೀಂದ್ರನಾಥ್, ನಗರಸಭೆ ಸದಸ್ಯ ಅಂಬರೀಷ್, ಕುಡುವನಹಳ್ಳಿ ಆನಂದ್, ವೀರೇಂದ್ರ ಪಾಟೀಲ್, ಗ್ರಾಪಂ ಸದಸ್ಯ ಗಣೇಶ್, ಗ್ರಾಮದ ಮುಖಂಡಾದ ವೆಂಕಟೇಶ್, ಕಿರಣ್, ಶಂಕರ್ ಮುಂತಾದವರು ಇದ್ದರು.

ಚಿತ್ರ : ಕೋಲಾರ ತಾಲ್ಲೂಕಿನ ಅರಾಭಿಕೊತ್ತನೂರು ಗ್ರಾಮ ಪಂಚಾಯಿತಿಯ ಚಿಕ್ಕ ಅಯ್ಯೂರು ಗ್ರಾಮದಲ್ಲಿ ನಡೆದ ವಾಲ್ಮೀಕಿ ಜಯಂತಿಯನ್ನು ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್ ಉದ್ಘಾಟಿಸಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande