ಬಳ್ಳಾರಿ, 13 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಬಳ್ಳಾರಿ(ಗ್ರಾಮಾಂತರ) ಶಿಶು ಅಭಿವೃದ್ಧಿ ಯೋಜನೆಯಡಿ 2006-07ನೇ ಸಾಲಿನಲ್ಲಿ ಭಾಗ್ಯಲಕ್ಷ್ಮೀ ಯೋಜನೆಯಡಿ ನೋಂದಾಯಿಸಲ್ಪಟ್ಟ 18 ವರ್ಷ ಪೂರ್ಣಗೊಂಡಿರುವ ಫಲಾನುಭವಿಗಳಲ್ಲಿ ಅರ್ಹರಾದ ಫಲಾನುಭವಿಗಳಿಗೆ ಪರಿಪಕ್ವ ಮೊತ್ತ ರೂ.32,351/-ಗಳನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಅಕ್ಟೋಬರ್ 31ರ ಒಳಗಾಗಿ ಸಂಬಂಧಿಸಿದ ದಾಖಲೆಗಳನ್ನು ನಗರದ ದೇವಿನಗರ ಕ್ಲಬ್ ರಸ್ತೆಯ ಮಹಿಳಾ ಪೊಲೀಸ್, ಠಾಣೆ ಪಕ್ಕದ ಕಾಂಪೌಂಡ್ ಶಿಶು ಅಭಿವೃದ್ಧಿ ಯೋಜನಾ ಕಚೇರಿ ಬಳ್ಳಾರಿ(ಗ್ರಾಮಾಂತರ) ಕಾರ್ಯಾಲಯಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.
ಅವಧಿ ಮುಗಿದ ಬಂದ ನಂತರ ಅರ್ಜಿಗಳನ್ನು ಪರಿಗಣಿಸುವುದಿಲ್ಲ ಎಂದು ಬಳ್ಳಾರಿ ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್