ಬೆಂಗಳೂರು, 13 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಉತ್ತರ ಕರ್ನಾಟಕದಲ್ಲಿ ನೆರೆಬಾಧಿತ ರೈತರ ಹೇಳತೀರದ ಗೋಳಾಗಿದ್ದು, ಇಲ್ಲಿ ಮರಿ ಖರ್ಗೆ ಅವರಿಗೆ ಆರ್ ಎಸ್ಎಸ್ ನಿಷೇಧ ಮಾಡುವ ಗೀಳು ಹತ್ತಿದೆ ಎಂದು ಪ್ರತಿಪಕ್ಷ ನಾಯಕ ಅರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಹೇಳಿಕೆ ನೀಡಿರುವ ಅವರು
ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕದ ರೈತರು ನೆರೆಯಿಂದ ಕಂಗಾಲಾಗಿದ್ದಾರೆ. ಹಸಿರು ಬರ ಘೋಷಣೆ ಮಾಡಿ, ಎಕರೆಗೆ 25,000 ರೂಪಾಯಿ ಪರಿಹಾರ ಕೊಡಿ, ಸಾಲ ಮನ್ನಾ ಮಾಡಿ ಎಂದು ಅನ್ನದಾತರು ಬೀದಿಗಿಳಿದು ಪ್ರತಿಭಟನೆ, ಬಂದ್ ಮಾಡುತ್ತಿದ್ದಾರೆ.
ಆದರೆ ಇಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಆರ್ ಎಸ್ಎಸ್ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಕಾಲಹರಣ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ಅವರೇ, ಆರ್ ಎಸ್ಎಸ್ ನಿಷೇಧ ಮಾಡುವ ನಿಮ್ಮ ಗೀಳು ಬಿಡಿ. ಈ ಕೂಡಲೇ ಮುಖ್ಯಮಂತ್ರಿಗಳ ಮನವೊಲಿಸಿ ನೆರೆ ಪೀಡಿತ ಪ್ರದೇಶಗಳಲ್ಲಿ ಹಸಿರು ಬರ ಘೋಷಣೆ ಮಾಡಿಸಿ ರೈತರ ಸಂಕಷ್ಟಕ್ಕೆ ಸ್ಪಂದಿಸಿ.
ಜನ ನಿಮಗೆ ಅಧಿಕಾರ ಕೊಟ್ಟಿರೋದು ಬರೀ ರಾಜಕಾರಣ ಮಾಡಲು ಅಲ್ಲ. ಆರ್ ಎಸ್ಎಸ್ ಬಗ್ಗೆ ನಿಮ್ಮ ಖಯಾಲಿ ಬಿಟ್ಟು ನಿಮ್ಮ ಜವಾಬ್ದಾರಿ ನಿರ್ವಹಿಸಿ ಎಂದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa