ಕುಷ್ಟಗಿ, 13 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಕುಷ್ಟಗಿ ತಾಲೂಕಿನ ಗ್ರಾಮದಲ್ಲಿ ಅಪ್ರಾಪ್ತೆಯ ಮೇಲೆ (17 ವರ್ಷದ ಬಾಲಕಿ) ದೋಟಿದಾಳ ಗ್ರಾಮ ಪಂಚಾಯತಿ ನೌಕರ ಹಲ್ಲೆ ಮಾಡಿ ಅತ್ಯಾಚಾರ ಮಾಡಿರುವ ಘಟನೆ ಭಾನುವಾರ ನಡೆದಿದ್ದು, ಸೋಮವಾರ ಆರೋಪಿಯನ್ನು ಪೊಲೀಸರು ಪೋಕ್ಸೋ ಕಾಯ್ದೆ ಅಡಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಯಲಬುರ್ಗಾ ತಾಲೂಕಿನ ದೋಟಿದಾಳ ಗ್ರಾಮ ಪಂಚಾಯಿತಿಯ ಕರವಸೂಲಿಗಾರ ಬೀರಪ್ಪ ಇಲಕಲ್ (27) ಅವರು ಬಾಲಕಿಯನ್ನು ಊರ ಹೊರಗಿನ ಹೊಲಕ್ಕೆ ಬಲವಂತದಿಂದ ಹೊತ್ತುಕೊಂಡು ಹೋಗಿ, ಹಲ್ಲೆ ನಡೆಸಿ, ಅತ್ಯಾಚಾರ ಮಾಡಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಬಾಲಕಿಯ ತಾಯಿ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದ ದೂರಿನ ಆಧಾರದ ಮೇಲೆ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿ, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣದ ಕುರಿತು ತನಿಖೆ ನಡೆದಿದೆ. ಅಪ್ರಾಪ್ತೆಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್