ನವದೆಹಲಿ, 13 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಕಾಶ್ಮೀರದಲ್ಲಿ ಮಾಜಿ ಭಾರತೀಯ ಆಡಳಿತ ಸೇವೆ ಅಧಿಕಾರಿ ಕಣ್ಣನ್ ಗೋಪಿನಾಥನ್ ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಅವರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅಧಿಕೃತವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಪಕ್ಷದ ವಕ್ತಾರರು ಪವನ್ ಖೇರಾ, ಜಿಗ್ನೇಶ್ ಮೇವಾನಿ ಮತ್ತು ಕನ್ಹಯ್ಯಾ ಕುಮಾರ್ ಸಹ ಉಪಸ್ಥಿತರಿದ್ದರು.
ಈ ವೇಳೆ ಮಾತನಾಡಿದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ , ಕಣ್ಣನ್ ಗೋಪಿನಾಥನ್ ದೀನ ದಲಿತರು ಮತ್ತು ಅಂಚಿನಲ್ಲಿರುವವರ ಪರವಾಗಿ ಧೈರ್ಯದಿಂದ ಮಾತನಾಡುವ ಅಧಿಕಾರಿಗಳಲ್ಲಿ ಒಬ್ಬರು. ಅವರ ಸೇರ್ಪಡೆ ನ್ಯಾಯ ಮತ್ತು ಸಮಾನತೆಯ ಸಿದ್ಧಾಂತಕ್ಕೆ ಬದ್ಧವಾದ ಪಕ್ಷವೆಂದರ ಸೂಚನೆ ಎಂದು ವೇಣುಗೋಪಾಲ್ ಹೇಳಿದ್ದಾರೆ. ಗೋಪಿನಾಥನ್ 2019 ರಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು, ಆದರೆ ಅದನ್ನು ಅಂಗೀಕರಿಸಲಾಗಿಲ್ಲ.
ಇದೇ ವೇಳೆ ಮಾತನಾಡಿದ ಪವನ್ ಖೇರಾ , ಕಣ್ಣನ್ ಗೋಪಿನಾಥನ್ 2012 ರ ಬ್ಯಾಚ್ ಐಎಎಸ್ ಅಧಿಕಾರಿ. ಜಮ್ಮು-ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವಾಗಿ ರಚಿಸುವುದು, ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ವಿವಿಪಿಎಟಿ ಮುಂತಾದ ವಿಚಾರಗಳಲ್ಲಿ ಅವರು ಕೇಂದ್ರ ಸರ್ಕಾರದ ವಿರುದ್ಧ ಸಿಡಿದ್ದೆದ್ದಿದ್ದರು. ಅವರ ವಿರುದ್ಧ ಹಲವಾರು ಎಫ್‌ಐಆರ್‌ಗಳು ದಾಖಲಾಗಿದ್ದರೂ ಅವರು ಸದಾ ನಿರ್ಭಯರಾಗಿದ್ದರು ಎಂದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa