ರಾಯಚೂರು, 13 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಕಾರ್ಮಿಕ ಸಚಿವರಾದ ಸಂತೋಷ ಲಾಡ್ ಅವರು ಅಕ್ಟೋಬರ್ 15ರಂದು ರಾಯಚೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಅಂದು ಮಧ್ಯಾಹ್ನ 1.30ಗಂಟೆಗೆ ಯಾದಗಿರಿ ಜಿಲ್ಲೆಯಿಂದ ನಿರ್ಗಮಿಸಿ ಮಧ್ಯಾಹ್ನ 2.30 ಗಂಟೆಗೆ ರಾಯಚೂರಿಗೆ ಆಗಮಿಸಿ, ಸಕ್ರ್ಯೂಟ್ ಹೌಸ್ ನಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ನಗರದ ಗಂಜ್ ಕಲ್ಯಾಣ ಮಂಟಪದಲ್ಲಿ ನಡೆಯುವ ಜಿಲ್ಲೆಯ ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ಯೋಜನೆಗಳ ಕುರಿತ ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5.30ಗಂಟೆಗೆ ಪಕ್ಷದ ಕಚೇರಿಗೆ ಭೇಟಿ ನೀಡಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್