ಸೋಮವಾರದ ರಾಶಿ ಫಲ
ಬೆಂಗಳೂರು, 13 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಸೋಮವಾರದ ರಾಶಿ ಫಲ *ಮೇಷ ರಾಶಿ.* ಉದ್ಯೋಗದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ ಮತ್ತು ರಾಜಕೀಯ ಮುಖಂಡರೊಂದಿಗಿನ ಪರಿಚಯಗಳು ವಿಸ್ತರಿಸುತ್ತವೆ. ಸ್ಥಿರಾಸ್ತಿ ಖರೀದಿಯ ಪ್ರಯತ್ನಗಳು ಅಂತ್ಯಗೊಳ್ಳುತ್ತವೆ. ವೃತ್ತಿ ವ್ಯವಹಾರದಲ್ಲಿ ನ
ಸೋಮವಾರದ ರಾಶಿ ಫಲ


ಬೆಂಗಳೂರು, 13 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಸೋಮವಾರದ ರಾಶಿ ಫಲ

*ಮೇಷ ರಾಶಿ.*

ಉದ್ಯೋಗದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ ಮತ್ತು ರಾಜಕೀಯ ಮುಖಂಡರೊಂದಿಗಿನ ಪರಿಚಯಗಳು ವಿಸ್ತರಿಸುತ್ತವೆ. ಸ್ಥಿರಾಸ್ತಿ ಖರೀದಿಯ ಪ್ರಯತ್ನಗಳು ಅಂತ್ಯಗೊಳ್ಳುತ್ತವೆ. ವೃತ್ತಿ ವ್ಯವಹಾರದಲ್ಲಿ ನಿರೀಕ್ಷಿತ ಫಲಿತಾಂಶ ದೊರೆಯುತ್ತದೆ. ಕುಟುಂಬದ ಸದಸ್ಯರಿಂದ ಅಗತ್ಯಕ್ಕೆ ತಕ್ಕಂತೆ ಆರ್ಥಿಕ ನೆರವು ದೊರೆಯುತ್ತದೆ.

*ವೃಷಭ ರಾಶಿ.*

ಮನೆಯ ಹೊರಗಿನ ವಿವಾದಗಳು ಸ್ವಲ್ಪ ಕಿರಿಕಿರಿ ಉಂಟುಮಾಡುತ್ತವೆ. ಕೈಗೆತ್ತಿಕೊಂಡ ಕೆಲಸಗಳು ಶ್ರಮದಾಯಕವಾಗಿದ್ದರೂ ಪೂರ್ಣಗೊಳ್ಳುವುದಿಲ್ಲ ಮತ್ತು ಕೆಲವು ಆರ್ಥಿಕ ಏರುಪೇರುಗಳು ಉಂಟಾಗುತ್ತವೆ. ನೀವು ವ್ಯರ್ಥ ಪ್ರಯಾಣವನ್ನು ಮಾಡಬೇಕಾಗುತ್ತದೆ. ವೃತ್ತಿ ವ್ಯವಹಾರಗಳಲ್ಲಿ ಆತುರದ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದಲ್ಲ.

*ಮಿಥುನ ರಾಶಿ.*

ಸಾಲದ ಒತ್ತಡ ಹೆಚ್ಚಾಗುತ್ತದೆ. ಕೈಗೆತ್ತಿಕೊಂಡ ಕೆಲಸಗಳು ಮಂದಗತಿಯಲ್ಲಿ ಸಾಗುತ್ತವೆ ಮತ್ತು ಪ್ರಮುಖ ವಿಷಯಗಳಲ್ಲಿ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಒಳ್ಳೆಯದಲ್ಲ ಮತ್ತು ಬಂಧು ಮಿತ್ರರೊಂದಿಗೆ ಸಣ್ಣ ವಿವಾದಗಳು ಉಂಟಾಗುತ್ತವೆ. ಹೊಸ ಉದ್ಯಮಗಳನ್ನು ಆರಂಭಿಸುವ ಬಗ್ಗೆ ಯೋಚಿಸಿ ಮುನ್ನಡೆಯುವುದು ಉತ್ತಮ. ಉದ್ಯೋಗದ ವಾತಾವರಣ ಗೊಂದಲಮಯವಾಗಿರುತ್ತವೆ.

*ಕಟಕ ರಾಶಿ.*

ಆತ್ಮಸ್ಥೈರ್ಯದಿಂದ ಪ್ರಮುಖ ಕಾರ್ಯಗಳನ್ನು ಪೂರ್ಣಗೊಳಿಸುತ್ತೀರಿ. ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ. ಬಾಲ್ಯದ ಸ್ನೇಹಿತರಿಂದ ಅಮೂಲ್ಯ ವಸ್ತುಗಳನ್ನು ಉಡುಗೊರೆಯಾಗಿ ಸ್ವೀಕರಿಸಲಾಗುತ್ತದೆ ಮತ್ತು ವಿದ್ಯಾರ್ಥಿಗಳ ಪರಿಶ್ರಮಕ್ಕೆ ಪ್ರತಿಫಲ ದೊರೆಯುತ್ತದೆ. ವೃತ್ತಿಪರ ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸಲಾಗುತ್ತವೆ.

*ಸಿಂಹ ರಾಶಿ.*

ಆರ್ಥಿಕ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತದೆ.ಬಾಲ್ಯ ಸ್ನೇಹಿತರೊಂದಿಗೆ ಮತ್ತು ಕುಟುಂಬ ಸದಸ್ಯರೊಂದಿಗೆ ಭೋಜನಾ ಮನರಂಜನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೀರಿ. ಹೊಸ ವ್ಯಕ್ತಿಗಳ ಭೇಟಿಯು ಉತ್ಸಾಹದಾಯಕವಾಗಿರುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಹೊಸ ಸ್ಥಾನಮಾನವನ್ನು ಪಡೆಯುತ್ತೀರಿ.

*ಕನ್ಯಾ ರಾಶಿ.*

ಕುಟುಂಬ ಸದಸ್ಯರೊಂದಿಗೆ ವಿವಾದದಗಳು ಉಂಟಾಗುತ್ತವೆ. ಹಣದ ವಿಷಯದಲ್ಲಿ ತೊಂದರೆಗಳು ಉಂಟಾಗುತ್ತವೆ. ಕೈಗೆತ್ತಿಕೊಂಡ ಕೆಲಸಗಳು ಸಕಾಲದಲ್ಲಿ ಪೂರ್ಣಗೊಳ್ಳದೇ ಕಿರಿಕಿರಿ ಉಂಟಾಗುತ್ತದೆ. ನಿರುದ್ಯೋಗ ಪ್ರಯತ್ನಗಳು ಮುಂದೂಡಲ್ಪಡುತ್ತವೆ. ದೂರ ಪ್ರಯಾಣದಲ್ಲಿ ವಾಹನ ಸಮಸ್ಯೆಗಳು ಎದುರಾಗುತ್ತವೆ.

*ತುಲಾ ರಾಶಿ.*

ಮನೆಯ ಹೊರಗೆ ಅನಿರೀಕ್ಷಿತ ಸಮಸ್ಯೆಗಳು ಎದುರಾಗುತ್ತವೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಒಳ್ಳೆಯದಲ್ಲ. ಸ್ನೇಹಿತರಿಂದ ಪ್ರಮುಖ ಮಾಹಿತಿ ದೊರೆಯುತ್ತದೆ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ವೃತ್ತಿಪರ ವ್ಯಾಪಾರಗಳು ಮಿಶ್ರ ಫಲಿತಾಂಶಗಳನ್ನು ಹೊಂದಿರುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳಿಂದ ಟೀಕೆಗಳು ಎದುರಾಗುತ್ತವೆ.

*ವೃಶ್ಚಿಕ ರಾಶಿ.*

ಬಹಳ ದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳಿಂದ ಮುಕ್ತಿ ದೊರೆಯುತ್ತದೆ . ಆತ್ಮೀಯರಿಂದ ಶುಭ ಸುದ್ದಿ ದೊರೆಯುತ್ತದೆ. ಹೊಸ ವಾಹನಗಳನ್ನು ಖರೀದಿಸಲಾಗುತ್ತದೆ. ಕುಟುಂಬದ ಸದಸ್ಯರೊಂದಿಗೆ ದೈವಿಕ ದರ್ಶನ ಪಡೆಯುತ್ತೀರಿ. ವ್ಯಾಪಾರ ಉದ್ಯೋಗಗಳಲ್ಲಿ ಹೆಚ್ಚು ಉತ್ಸಾಹದಿಂದ ಕೆಲಸ ಮಾಡಿ ಲಾಭವನ್ನು ಪಡೆಯುತ್ತೀರಿ. ಮನೆಯಲ್ಲಿ ಶುಭ ಕಾರ್ಯಗಳ ಪ್ರಸ್ಥಾಪವಿರುತ್ತದೆ.

*ಧನುಸ್ಸು ರಾಶಿ.*

ಸಂಗಾತಿಯೊಂದಿಗೆ ವಿನಾಕಾರಣ ವಿವಾದಗಳು ಉಂಟಾಗುತ್ತದೆ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ಅಡೆತಡೆಗಳಿರುತ್ತವೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಒಳ್ಳೆಯದಲ್ಲ. ವೃತ್ತಿಪರ ವ್ಯವಹಾರಗಳಲ್ಲಿ ಗೊಂದಲಮಯ ಸನ್ನಿವೇಶಗಳಿರುತ್ತವೆ. ಹೆಚ್ಚುವರಿ ಕೆಲಸದ ಹೊರೆಯಿಂದಾಗಿ ಉದ್ಯೋಗಿಗಳಿಗೆ ಸಾಕಷ್ಟು ವಿಶ್ರಾಂತಿ ಸಿಗುವುದಿಲ್ಲ.

*ಮಕರ ರಾಶಿ.*

ಆರ್ಥಿಕ ಪ್ರಗತಿ ಉಂಟಾಗುತ್ತದೆ. ಆಪ್ತ ಸ್ನೇಹಿತರೊಂದಿಗೆ ಮನೆಯಲ್ಲಿ ಸಂತೋಷದಿಂದ ಕಳೆಯುತ್ತೀರಿ. ಕೈಗೊಂಡ ವ್ಯವಹಾರಗಳಲ್ಲಿ ಅಪ್ರಯತ್ನ ಕಾರ್ಯ ಸಿದ್ಧಿ ಉಂಟಾಗುತ್ತದೆ. ವೃತ್ತಿಪರ ಉದ್ಯೋಗಗಳು ಅನುಕೂಲಕರವಾಗಿರುತ್ತದೆ. ನಿರುದ್ಯೋಗಿಗಳಿಗೆ ಅಪರೂಪದ ಅವಕಾಶಗಳು ದೊರೆಯುತ್ತವೆ. ವ್ಯಾಪಾರ ವಿಸ್ತರಣೆಗೆ ಸ್ನೇಹಿತರ ಸಹಾಯ ದೊರೆಯುತ್ತದೆ.

*ಕುಂಭ ರಾಶಿ.*

ಹೊಸ ಸಾಲ ಪ್ರಯತ್ನಗಳು ಫಲ ನೀಡುತ್ತವೆ. ಹಠಾತ್ ಪ್ರಯಾಣವನ್ನು ಮಾಡಬೇಕಾಗುತ್ತದೆ. ಕುಟುಂಬದ ಸದಸ್ಯರು ನಿಮ್ಮ ಮಾತಿಗೆ ಒಪ್ಪುವುದಿಲ್ಲ. ಸ್ನೇಹಿತರೊಂದಿಗೆ ದೇಗುಲಗಳಿಗೆ ಭೇಟಿ ನೀಡುತ್ತೀರಿ. ವೃತ್ತಿಪರ ವ್ಯವಹಾರಗಳಲ್ಲಿ ಅನಿರೀಕ್ಷಿತ ಬದಲಾವಣೆಗಳು ಉಂಟಾಗುತ್ತದೆ . ಉದ್ಯೋಗದಲ್ಲಿ ಸಹೋದ್ಯೋಗಿಗಳೊಂದಿಗಿನ ವಿವಾದಗಳು ಬಗೆಹರಿಯುತ್ತವೆ.

*ಮೀನ ರಾಶಿ.*

ಮನೆಯಲ್ಲಿ ಶುಭ ಕಾರ್ಯಗಳನ್ನು ನೆರವೇರುಸುತ್ತೀರಿ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಹೊಸ ವಸ್ತು ಲಾಭ ದೊರೆಯುತ್ತದೆ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ. ಭೂಮಿ ಮಾರಾಟದಲ್ಲಿ ಲಾಭ ದೊರೆಯುತ್ತದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande