ದೇಹದ ಸರ್ವಾಂಗೀಣ ಅಭಿವೃದ್ಧಿಗೆ ಪೌಷ್ಠಿಕ ಆಹಾರ ತುಂಬಾ ಮುಖ್ಯ : ನ್ಯಾ.ಮಹಾಂತೇಶ
ಕೊಪ್ಪಳ, 13 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಪೌಷ್ಟಿಕ ಆಹಾರವನ್ನು ಕ್ರಮಬದ್ದವಾಗಿ ಸೇವನೆ ಮಾಡಬೇಕು. ದೇಹದ ಸರ್ವಾಂಗೀಣ ಅಭಿವೃದ್ಧಿಗೆ ಪೌಷ್ಟಿಕ ಆಹಾರ ಸೇವನೆ ತುಂಬಾ ಮುಖ್ಯ. ಆಹಾರದಲ್ಲಿ ವೈವಿಧ್ಯೆತೆ ಕಂಡುಕೊಳ್ಳಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದ
ದೇಹದ ಸರ್ವಾಂಗೀಣ ಅಭಿವೃದ್ಧಿಗೆ ಪೌಷ್ಠಿಕ ಆಹಾರ ತುಂಬಾ ಮುಖ್ಯ:ನ್ಯಾ.ಮಹಾಂತೇಶ


ದೇಹದ ಸರ್ವಾಂಗೀಣ ಅಭಿವೃದ್ಧಿಗೆ ಪೌಷ್ಠಿಕ ಆಹಾರ ತುಂಬಾ ಮುಖ್ಯ:ನ್ಯಾ.ಮಹಾಂತೇಶ


ಕೊಪ್ಪಳ, 13 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಪೌಷ್ಟಿಕ ಆಹಾರವನ್ನು ಕ್ರಮಬದ್ದವಾಗಿ ಸೇವನೆ ಮಾಡಬೇಕು. ದೇಹದ ಸರ್ವಾಂಗೀಣ ಅಭಿವೃದ್ಧಿಗೆ ಪೌಷ್ಟಿಕ ಆಹಾರ ಸೇವನೆ ತುಂಬಾ ಮುಖ್ಯ. ಆಹಾರದಲ್ಲಿ ವೈವಿಧ್ಯೆತೆ ಕಂಡುಕೊಳ್ಳಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾ.ಮಹಾಂತೇಶ ದರಗದ ಅವರು ಹೇಳಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಮಹಿಳಾ ವiತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ, ಕೊಪ್ಪಳ ಇವರ ಸಂಯುಕ್ತಾಶ್ರದಲ್ಲಿ ಸೋಮವಾರದಂದು ಕೊಪ್ಪಳ ಯೋಜನೆಯ ಭಾಗ್ಯನಗರದ ಅಂಬೇಡ್ಕರ್ ಸಮುದಾಯ ಭವನದಲ್ಲಿ 8ನೇ ರಾಷ್ಟ್ರೀಯ ಪೋಷಣ್ ಮಾಸಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಸಮಾರೋಪ ಕಾರ್ಯಕ್ರಮವನ್ನು ಹಾಗೂ ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ರೋಹಿಣಿ ಕೋಟಗಾರ ರವರು ಮಾತನಾಡಿ, ಪೌಷ್ಟಿಕ ಆಹಾರ ಹಾಗೂ ಉತ್ತಮ ಜೀವನ ಶೈಲಿಯನ್ನು ಅಳವಡಿಸಿಕೊಂಡು ಎಲ್ಲಾ ಗರ್ಭಿಣಿ, ಬಾಣಂತಿಯರು ಆರೋಗ್ಯಕರ ಮಗುವಿಗೆ ಜನ್ಮ ನೀಡುವ ನಿಟ್ಟಿನಲ್ಲಿ ವಹಿಸಬೇಕಾದ ಕ್ರಮಗಳನ್ನು ತಿಳಿಸಿದರು. ಅಂಗನವಾಡಿ ಕೇಂದ್ರದಲ್ಲಿ ಪಡೆಯುವ ಎಲ್ಲಾ ಪೌಷ್ಟಿಕ ಆಹಾರಗಳ ಸದುಪಯೋಗದ ಬಗ್ಗೆ ತಿಳಿಸಿದರು. ಹೆಣ್ಣನ್ನು ಓದಿಸಿ, ಬೆಳೆಸಿ ಎಂದು ಹೇಳಿದರು.

ಪಟ್ಟಣ ಪಂಚಾಯತಿ ಉಪಾಧ್ಯಕ್ಷ ಹೊನ್ನೂರುಸಾಬ ಭೈರಾಪುರ ಅವರು ಮಾತನಾಡಿ, ಮಕ್ಕಳು ಮತ್ತು ಮಹಿಳೆಯರು ಸಧೃಡವಾಗಿ ಮತ್ತು ಆರೋಗ್ಯವಾಗಿದ್ದರೆ ದೇಶದ ನಿರ್ಮಾಣ ಮಾಡಬಹುದು. ಜಂಕ್‍ಫುಡ್ ನಿರಾಕರಣೆ ಮಾಡಲು ತಿಳಿಸಿದರು.

ಕಾರ್ಯಕ್ರಮದಲ್ಲಿ ಭಾಗ್ಯನಗರ ಪಟ್ಟಣ ಪಂಚಾಯತ್ ಅಧ್ಯಕ್ಷ ತುಕಾರಾಮಪ್ಪ ಗಡಾದ, ಭಾಗ್ಯನಗರ ಪ.ಪಂ. ಮುಖ್ಯಾಧಿಕಾರಿ ಸುರೇಶ ಬಬಲಾದ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶಿವಶರಣಪ್ಪ ಗದ್ದಿ ಮತ್ತು ರೂಪ ಗಂಧದ, ಭಾಗ್ಯನಗರ ವಲಯದ ಮೇಲ್ವಿಚಾರಕಿ ರೋಜಾ ಎಲ್.ಹೆಚ್.ವಿ., ಪೋಷಣ್ ಅಭಿಯಾನ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಸಹಾಯಕರು, ಕಾರ್ಯಕ್ರಮದ ರೂವಾರಿಗಳಾದ ಗರ್ಭಿಣಿಯರು, ಬಾಣಂತಿಯರು, ತಾಯಂದಿರು, ಮುದ್ದು ಮಕ್ಕಳು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಸೀಮಂತ, ಅನ್ನಪ್ರಾಶನ ಕಾರ್ಯಕ್ರಮ ಹಾಗೂ ವೇಷಭೂಷಣ ಸ್ಪರ್ಧೆ ಏರ್ಪಡಿಸಲಾಗಿತ್ತು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande