ರಾಯಚೂರು, 13 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ವಿಜಯಪುರ ಶಾಸಕ ಬಸವನಗೌಡ ಯತ್ನಾಳ್ ಮತ್ತು ಶಿವಸೇನೆಯ ಉದ್ದೇಶ ಒಂದೇ ಆಗಿದ್ದು ಯತ್ನಾಳ್ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ನಿಟ್ಟಿನಲ್ಲಿ ಅವರೊಂದಿಗೆ ಮಾತುಕತೆ ನಡೆಸಲು ನಾಳೆ (ಮಂಗಳವಾರ) ವಿಜಯಪುರಕ್ಕೆ ಹೊರಟಿರುವೆ ಎಂದು ಶಿವಸೇನೆ ರಾಜ್ಯಾಧ್ಯಕ್ಷ ಆಂದೋಲ ಸಿದ್ದಲಿಂಗ ಸ್ವಾಮಿ ಅವರು ತಿಳಿಸಿದ್ದಾರೆ.
ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಮಂಗಳವಾರ ಭೇಟಿ ಮಾಡಿ, ಮಾತುಕತೆ ನಡೆಸುವೆ. ಯತ್ನಾಳ್ ಅವರು ಒಪ್ಪಿದ್ದಲ್ಲಿ ಶಿವಸೇನೆಗೆ ಸ್ವಾಗತಿಸುವೆ. ನಾವಿಬ್ಬರೂ ಒಂದೇ ವೇದಿಕೆಯಲ್ಲಿ ಹೋರಾಟಗಳನ್ನು ನಡೆಸುತ್ತೇವೆ. ಬಿಜೆಪಿ ಮತ್ತು ಶಿವಸೇನೆ ಎರೆಡೂ ಒಂದೇ ಆಗಿದ್ದು, ಕೇಂದ್ರದಲ್ಲಿ ಎನ್‍ಡಿಎ ಮೈತ್ರಿಕೂಟದ ಸರ್ಕಾರ ಇದೆ. ಕರ್ನಾಟಕದಲ್ಲಿ ಹಿಂದೂಗಳ ಮತಗಳನ್ನು ಒಡೆಯದಂತೆ ಶಿವಸೇನೆ ಮತ್ತು ಬಿಜೆಪಿಯನ್ನು ಕರ್ನಾಟಕದಲ್ಲಿ ಬಲಿಷ್ಠವಾಗಿ ಕಟ್ಟೋಣ ಎಂದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್