ಶಿವಸೇನಾ ನಾಯಕ ಸಂಜಯ್ ರಾವತ್ ಆಸ್ಪತ್ರೆಗೆ ದಾಖಲು
ಮುಂಬಯಿ, 13 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಶಿವಸೇನಾ (ಯುಬಿಟಿ) ಹಿರಿಯ ನಾಯಕ ಮತ್ತು ಸಂಸದ ಸಂಜಯ್ ರಾವತ್ ಅವರ ಆರೋಗ್ಯ ಸ್ಥಿತಿಯಲ್ಲಿ ಹಠಾತ್ತನೆ ಏರುಪೇರಾದ ಕಾರಣ ಅವರನ್ನು ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಜಯ್ ರಾವತ್ ಅವರು ಸೋಮವಾರ ಬೆಳಿಗ್ಗೆ ವಿಖ್ರೋಲಿ ನಿವಾಸದಲ್ಲಿ ಪತ್ರಿಕಾಗೋಷ್ಠಿ
ಶಿವಸೇನಾ ನಾಯಕ ಸಂಜಯ್ ರಾವತ್ ಆಸ್ಪತ್ರೆಗೆ ದಾಖಲು


ಮುಂಬಯಿ, 13 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಶಿವಸೇನಾ (ಯುಬಿಟಿ) ಹಿರಿಯ ನಾಯಕ ಮತ್ತು ಸಂಸದ ಸಂಜಯ್ ರಾವತ್ ಅವರ ಆರೋಗ್ಯ ಸ್ಥಿತಿಯಲ್ಲಿ ಹಠಾತ್ತನೆ ಏರುಪೇರಾದ ಕಾರಣ ಅವರನ್ನು ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಜಯ್ ರಾವತ್ ಅವರು ಸೋಮವಾರ ಬೆಳಿಗ್ಗೆ ವಿಖ್ರೋಲಿ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಬಳಿಕ ಅಸ್ವಸ್ಥತೆಯನ್ನು ಅನುಭವಿಸಿದ್ದರು. ಬಳಿಕ ಅವರನ್ನು ತುರ್ತಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯಕೀಯ ತಜ್ಞರ ತಂಡ ಅವರ ಆರೋಗ್ಯವನ್ನು ಗಮನಿಸುತ್ತಿದೆ. ಪ್ರಸ್ತುತ ಅವರ ಸ್ಥಿತಿ ಸ್ಥಿರವಾಗಿರುವುದಾಗಿ ಮೂಲಗಳು ತಿಳಿಸಿವೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande