ಕೊಪ್ಪಳ, 13 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಗಿಣಿಗೇರಾದ ಹೊಸಪೇಟೆ ಸ್ಟೀಲ್ಸ್ ಲಿಮಿಟೆಡ್ ಕಂಪನಿಯಿಂದ ಶಿಶಿಕ್ಷು ತರಬೇತಿಗಾಗಿ ಅಕ್ಟೋಬರ್ 17 ರಂದು ಬೆಳಿಗ್ಗೆ 10 ಗಂಟೆಗೆ ತಳಕಲ್‍ನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನವನ್ನು ಏರ್ಪಡಿಸಲಾಗಿದೆ.
ಐಟಿಐ ಎಲ್ಲ ವೃತ್ತಿಗಳು, ಬಿ.ಕಾಂ., ಬಿ.ಎಸ್‍ಸಿ(ಕೆಮಿಸ್ಟ್ರಿ) ಮತ್ತು ಬಿ.ಇ(ಮೆಕ್ಯಾನಿಕಲ್, ಪ್ರೊಡಕ್ಷನ್) ನಲ್ಲಿ ಶೇ.60 ರಷ್ಟು ಅಂಕಗಳನ್ನು ಪಡೆದ ಅಭ್ಯರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಭಾಗವಹಿಸಬಹುದು.
ಈ ಕ್ಯಾಂಪಸ್ ಸಂದರ್ಶನಕ್ಕೆ ಭಾಗವಹಿಸುವ ಆಸಕ್ತರು ತಮ್ಮ ವಿದ್ಯಾರ್ಹತೆಯ ಮೂಲ ದಾಖಲಾತಿಗಳು(ಶೇ.60 ಅಂಕಗಳು), ಬ್ಯಾಂಕ್ ಖಾತೆಗೆ ಜೋಡಣೆಯಾಗಿರುವ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‍ಬುಕ್‍ಗಳ ಒಂದು ಸೆಟ್ ಜೆರಾಕ್ಸ್ ಪ್ರತಿಗಳು ಮತ್ತು ಇ-ಕೆವೈಸಿ ಹಾಗೂ ಆಧಾರ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯನ್ನು ಹೊಂದಿರಬೇಕು.
ಹೆಚ್ಚಿನ ಮಾಹಿತಿಗಾಗಿ ತಳಕಲ್ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಮೊಬೈಲ್ ಸಂ: 9740358208, 9945982260, 6363737640 ಹಾಗೂ 8147811887 ಇವರಿಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್