ಧಾರವಾಡ, 13 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಧಾರವಾಡದ ಹೊರವಲಯದ ತೇಗೂರು ಬಳಿ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹತ್ತು ಜನರು ಗಾಯಗೊಂಡಿದ್ದಾರೆ.
ಮಹಾರಾಷ್ಟ್ರದ ಕೊಲ್ಲಾಪುರದಲ್ಲಿರುವ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಿ ಗದಗಕ್ಕೆ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಮೃತರನ್ನು ಗದಗದ ಹುಡ್ಕೊ ಕಾಲೋನಿಯ ನಿವಾಸಿಗಳಾದ ಸುರೇಶ್ ತುಪ್ಪದ್ (55) ಮತ್ತು ಅವರ ತಾಯಿ ಮಹಾಂತಮ್ಮ (85) ಎಂದು ಗುರುತಿಸಲಾಗಿದೆ. ಅದೇ ವಾಹನದಲ್ಲಿದ್ದ ಇತರ ಹತ್ತು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಗರಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa