ದೀಪಾವಳಿ ಹಬ್ಬದ ಪ್ರಯುಕ್ತ ಹೆಚ್ಚುವರಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ
ಗದಗ, 14 ಅಕ್ಟೋಬರ್ (ಹಿ.ಸ.) : ಆ್ಯಂಕರ್ : 2025 ನೇ ಸಾಲಿನ ದೀಪಾವಳಿ ಹಬ್ಬದ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳುವುದರಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾ
ಪೋಟೋ


ಗದಗ, 14 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : 2025 ನೇ ಸಾಲಿನ ದೀಪಾವಳಿ ಹಬ್ಬದ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳುವುದರಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಸುಮಾರು 310 ಹೆಚ್ಚುವರಿ ವಿಶೇಷ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ.

ದಿ: 20-10-2025 ಮತ್ತು ದಿ: 22-10-2025 ರಂದು ಕ್ರಮವಾಗಿ ನರಕ ಚತುರ್ಧಶಿ ಹಾಗೂ ದೀಪಾವಳಿ ಅಂಗವಾಗಿ ಸರ್ಕಾರಿ ರಜೆ ಹಾಗೂ ದಿ: 18-10-2025 ಹಾಗೂ 19-10-2025 ರಂದು ವಾರಾಂತ್ಯ ದಿನಗಳಾಗಿದ್ದರಿಂದ ಬೆಂಗಳೂರು ಮತ್ತು ಇತರೇ ಪ್ರಮುಖ ಸ್ಥಳಗಳಿಂದ ಹೆಚ್ಚಿನ ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳಲು ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುವುದು. ಬೆಂಗಳೂರಿನಿಂದ ರಾಜ್ಯ/ಅಂತರರಾಜ್ಯ ವಿವಿದ ಸ್ಥಳಗಳಿಗೆ ತೆರಳಲು ದಿನಾಂಕ: 17-10-2025 ರಿಂದ 19-10-2025 ರಂದು ಹೆಚ್ಚುವರಿ ವಿಶೇಷ ಸಾರಿಗೆ ಸೌಲಭ್ಯವನ್ನು ಕಲ್ಪಿಸಲಾಗಿದೆ. ಹಬ್ಬ ಮುಗಿದ ನಂತರ ದಿನಾಂಕ: 22-10-2025 ಮತ್ತು ನಂತರ ದಿನಗಳಂದು ಪ್ರಮುಖ ಸ್ಥಳಗಳಿಗೆ ಜನದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲಾಗುವುದು.

ಹೆಚ್ಚುವರಿ ಸಾರಿಗೆಗಳ ಸದುಪಯೋಗ ಪಡಿಸಿಕೊಳ್ಳುವದರೊಂದಿಗೆ, ಸುಖಕರ ಹಾಗೂ ಸುರಕ್ಷಿತ ಪ್ರಯಾಣಕ್ಕಾಗಿ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣಿಸುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande