ರಾಜ್ಯ ವಿಕೇಂದ್ರೀಕರಣ ಯೋಜನಾ ಸಮಿತಿಯ ಉಪಾಧ್ಯಕ್ಷರಾಗಿ ಡಿ.ಆರ್.ಪಾಟೀಲ ನೇಮಕ
ಬೆಂಗಳೂರು, 14 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಗದಗ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಡಿ. ಆರ್. ಪಾಟೀಲ ಅವರನ್ನು ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಈ ನೇಮಕಾತಿ ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರ ಆದೇಶ ಹೊರಡಿಸಿದ್ದು, ಪಾಟ
DR patil


ಬೆಂಗಳೂರು, 14 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಗದಗ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಡಿ. ಆರ್. ಪಾಟೀಲ ಅವರನ್ನು ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

ಈ ನೇಮಕಾತಿ ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರ ಆದೇಶ ಹೊರಡಿಸಿದ್ದು, ಪಾಟೀಲ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಮತ್ತು ಸೌಲಭ್ಯ ನೀಡಲಾಗಿದೆ.

ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ಅಧಿನಿಯಮ 1993ರ ಪ್ರಕಾರ, 310-ಬಿ ಉಪಪ್ರಕರಣ (2)ರಡಿ ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿ ಕ್ಷೇತ್ರದಲ್ಲಿ ತಜ್ಞರನ್ನಾಗಿ ಪರಿಗಣಿಸಿ ಈ ನೇಮಕಾತಿ ಮಾಡಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande