ಹೊಸಪೇಟೆ, 14 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯನ್ನು ಕೂಡ್ಲಿಗಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಅಕ್ಟೋಬರ್.17 ರಂದು, ಮಧ್ಯಾಹ್ನ 2:30 ಕ್ಕೆ ದಿಶಾ ಸಮಿತಿ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ ಮೋಹಮ್ಮದ್ ಅಲಿ ಅಕ್ರಮ್ ಪಾಷಾ ತಿಳಿಸಿದ್ದಾರೆ.
ದಿಶಾ ಸಮಿತಿ ಸಭೆಯಲ್ಲಿ ಎಲ್ಲಾ ಇಲಾಖೆಗಳಿಗೆ ಸಂಬಂಧಿಸಿದಂತೆ ಎಲ್ಲಾ ಯೋಜನೆಗಳ 2025-26 ನೇ ಸಾಲಿನ ಮೊದಲೇ ಹಾಗೂ ಎರಡನೇ ತ್ರೈಮಾಸಿಕ ಪ್ರಗತಿ ಪರಿಶೀಲನೆ ನಡೆಸಲಾಗುತ್ತದೆ. ಎಲ್ಲಾ ಇಲಾಖೆಗಳಿಗೆ ಸಂಬಂಧಿಸಿದ ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಖುದ್ದಾಗಿ ಎಲ್ಲಾ ಮಾಹಿತಿಯೊಂದಿಗೆ ಹಾಜರಾಗಬೇಕು.
ಬಳ್ಳಾರಿ ಮತ್ತು ವಿಜಯನಗರ ಲೋಕ ಸಭಾ ಕ್ಷೇತ್ರದ ಸಂಸದರಾದ ಇ.ತುಕಾರಾಮ್ ಅವರ ಅಧ್ಯಕ್ಷತೆಯಲ್ಲಿ ಸಭೆ ಜರುಗಲಿದ್ದು, ದಿಶಾ ಸಭೆಯ ಪೂರ್ವದಲ್ಲಿ ಮಧ್ಯಾಹ್ನ 2 ಗಂಟೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಸ್ಥಳೀಯರು ಮತ್ತು ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ಪರಿಹರಿಸಿಕೊಳ್ಳಲು ಅಹವಾಲು ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್