ರಾಯಚೂರು, 14 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಕೊಪ್ಪಳ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾಗಿರುವ ಡಾ.ಸುರೇಶ ಜಿ. ಅವರು, ರಾಯಚೂರಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಭಾರಿ ಹಿರಿಯ ಸಹಾಯಕ ನಿರ್ದೇಶಕರಾಗಿ ಅಕ್ಟೋಬರ್ 14ರಂದು ಅಧಿಕಾರ ಸ್ವೀಕರಿಸಿದರು.
ಯಾದಗಿರಿ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾಗಿರುವ ಸುಲೈಮಾನ್ ಡಿ.ನಧಾಪ್ ಅವರು, ಸುರೇಶ ಅವರಿಗೆ ರಾಯಚೂರು ಕಚೇರಿಯ ಹಿರಿಯ ಸಹಾಯಕ ನಿರ್ದೇಶಕರ ಹುದ್ದೆಯ ಅಧಿಕಾರವನ್ನು ಹಸ್ತಾಂತರ ಮಾಡಿದರು
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್