ವಿಜಯಪುರ, 14 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಆಲಮಟ್ಟಿ ಬಲದಂಡೆ ಕಾಲುವೆಯ ಸಹಾಯಕ ಮುಖ್ಯ ಎಂಜಿನಿಯರ್ ಚೇತನ್ ಅವರ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಎಸ್.ಪಿ ಮಲ್ಲೇಶ್ ಮಾರ್ಗದರ್ಶನದಲ್ಲಿ ಡಿವೈಎಸ್.ಪಿ ನೇತೃತ್ವದ ೧೨ ಸಿಬ್ಬಂದಿಗಳ ತಂಡ ದಾಳಿ ಮಾಡಿದ ಘಟನೆ ಬಾಗಲಕೋಟೆಯ ನವನಗರದಲ್ಲಿ ನಡೆದಿದೆ.
ಆದಾಯ ಮೀರಿ, ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆಯಲ್ಲಿ ಕೆಬಿಜೆಎನ್.ಎಲ್ ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್ ಆಗಿರುವ ಚೇತನ್ ಅವರ ಬಾಗಲಕೋಟೆ ನವನಗರದ ಸೆಕ್ಟರ್ ನಂಬರ್ ೧೬ ರಲ್ಲಿರುವ ಮನೆ ಹಾಗೂ ಕಮತಗಿಯಲ್ಲಿರುವ ಕಚೇರಿ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.
ಡಿವೈಎಸ್.ಪಿ ಸಿದ್ದೇಶ್ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು, ಎಲ್ಲದಾಖಲೆಗಳ ಪರಿಶೀಲನೆಯನ್ನು ಮಾಡುತ್ತಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande