ಬೆಂಗಳೂರು ಸೇರಿದಂತೆ ರಾಜ್ಯದ ೧೨ ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ
ಬೆಂಗಳೂರು, 14 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಆದಾಯಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪದಡಿ ಬೆಂಗಳೂರು ಸೇರಿದಂತೆ ರಾಜ್ಯದ 12 ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಹಾಸನ, ಕಲಬುರಗಿ, ಚಿತ್ರದುರ್ಗ, ಉಡುಪಿ, ದಾವಣಗೆರೆ,
Raid


ಬೆಂಗಳೂರು, 14 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಆದಾಯಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪದಡಿ

ಬೆಂಗಳೂರು ಸೇರಿದಂತೆ ರಾಜ್ಯದ 12 ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರು, ಹಾಸನ, ಕಲಬುರಗಿ, ಚಿತ್ರದುರ್ಗ, ಉಡುಪಿ, ದಾವಣಗೆರೆ, ಹಾವೇರಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ನಡೆದಿದೆ.

ದಾಳಿಗೊಳಗಾದ ಅಧಿಕಾರಿಗಳ ವಿವರ ಇಂತಿದೆ...

ಬೆಂಗಳೂರು ಮಂಜುನಾಥ್ ಜಿ, ವೈದ್ಯಾಧಿಕಾರಿ - ಮಲ್ಲಸಂದ್ರ ಹೆರಿಗೆ ಆಸ್ಪತ್ರೆ, ವಿ ಸುಮಂಗಲ, ನಿರ್ದೇಶಕಿ - ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ, ಎನ್.ಕೆ ಗಂಗಮರಿ ಗೌಡ, ಸರ್ವೇಯರ್ - ವಿಶೇಷ ಭೂ ಸ್ವಾಧೀನ ಅಧಿಕಾರಿ, ಬಿಎಂಆರ್‌ಸಿಎಲ್

ಹಾಸನದ ಆರೋಗ್ಯ ಮತ್ತು‌ ಕುಟುಂಬ ಕಲ್ಯಾಣ ಇಲಾಖೆ ಪ್ರಥಮ ದರ್ಜೆ ಸಹಾಯಕಿ ಜ್ಯೋತಿ ಮೇರಿ. ಕಲಬುರಗಿ ಕೃಷಿ ಇಲಾಖೆ ಸಹಾಯಕ‌ ನಿರ್ದೇಶಕ ಧೂಳಪ್ಪ, ಚಿತ್ರದುರ್ಗ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಚಂದ್ರಕುಮಾರ್, ಉಡುಪಿ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿ ಲಕ್ಷ್ಮೀನಾರಾಯಣ್ ಪಿ.ನಾಯಕ್.

ದಾವಣಗೆರೆ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಜಗದೀಶ್ ನಾಯಕ್,

ದಾವಣಗೆರೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಕಿರಿಯ ಇಂಜಿನಿಯರ್ ಬಿ.ಎಸ್ ನಡುವಿನಮನಿ,

ಹಾವೇರಿ ಜಿಲ್ಲೆಯ ರಾಣೆಬೆನ್ನೂರ ತಾಲೂಕಿನ ಕಂದಾಯ ಅಧಿಕಾರಿ ಅಶೋಕ್, ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕು ಪಂಚಾಯತ್ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿ

ಬಸವೇಶ್ ಹಾಗೂ ಬಾಗಲಕೋಟೆ ಆಲಮಟ್ಟಿ ಬಲದಂಡೆ ಕಾಲುವೆ ಕಿರಿಯ ಇಂಜಿನಿಯರ್ ಚೇತನ್, ಇವರಿಗೆ ಸಂಬಂಧಿಸಿದ‌ ಸ್ಥಳಗಳಲ್ಲಿ ದಾಳಿ ನಡೆಸಲಾಗಿದ್ದು ಶೋಧ ಕಾರ್ಯ ಮುಂದುವರೆದಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande