ಫಲಪುಷ್ಪ ಪ್ರದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ : ಬಿ.ಆರ್ ಪೂರ್ಣಿಮಾ
ಹಾಸನ, 14 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಶ್ರೀ ಹಾಸನಾಂಬ ದೇವಿ ದರ್ಶನ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ಹೇಮಾವತಿ ತೋಟಗಾರಿಕೆ ಸಂಘ (ನಿ), ಹಾಸನ ಹಾಗೂ ಅಭಿವೃದ್ಧಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಅ.17 ರಿಂದ ಅ.2
Flower show


ಹಾಸನ, 14 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಶ್ರೀ ಹಾಸನಾಂಬ ದೇವಿ ದರ್ಶನ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ಹೇಮಾವತಿ ತೋಟಗಾರಿಕೆ ಸಂಘ (ನಿ), ಹಾಸನ ಹಾಗೂ ಅಭಿವೃದ್ಧಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಅ.17 ರಿಂದ ಅ.20 ರವರಗೆ ಫಲಪುಷ್ಪ ಪ್ರದರ್ಶನವನ್ನು ನಗರದ ಸಿಲ್ವರ್ ಜುಬಿಲಿ ಪಾರ್ಕ್ನಲ್ಲಿ ಏರ್ಪಡಿಸಲಾಗುತ್ತಿದೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್ ಪೂರ್ಣಿಮಾ ಅವರು ತಿಳಿಸಿದ್ದಾರೆ.

ಹಾಸನ ನಗರದ ಸಿಲ್ವರ್ ಜುಬಿಲಿ ಪಾರ್ಕ್ನಲ್ಲಿಂದು ಫಲಪುಷ್ಪ ಪ್ರದರ್ಶನ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಈ ಹಿಂದೆ ಗಣರಾಜ್ಯೋತ್ಸವ ಅಥವಾ ಕನ್ನಡ ರಾಜ್ಯೋತ್ಸವದಂತಹ ಕಾರ್ಯಕ್ರಮದಲ್ಲಿ ಮಾತ್ರ ಫಲಪುಷ್ಪ ಪ್ರದರ್ಶನ ಮಾಡುತ್ತಿದ್ದೆವು. ಕಳೆದ ವರ್ಷದಿಂದ ಹಾಸನಾಂಬ ಜಾತ್ರೆಗೆ, ದೇವಿ ದರ್ಶನಕ್ಕೆ ಬಂದಿರುವ ಭಕ್ತರಿಗೆ ಹಾಸನದ ಜನತೆಗೆ ನೋಡುವುದಕ್ಕೆ ಅನುಕೂಲವಾಗಲೆಂದು 2024ನೇ ಸಾಲಿನಿಂದ ಈ ಕಾರ್ಯಕ್ರಮವನ್ನು ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಫಲಪುಷ್ಪ ಪ್ರದರ್ಶನದಲ್ಲಿ ಒಟ್ಟು 8000 ಸಂಖ್ಯೆಯ ವಿವಿಧ ಬಗೆಯ ಹೂವಿನ ಗಿಡಗಳನ್ನು ಉದ್ಯಾನವನದ ಪಾತಿಗಳಲ್ಲಿ ಮತ್ತು ವಿವಿಧ ಅಳತೆಯ ಪಾಟುಗಳಲ್ಲಿ ಬೆಳಸಲಾಗಿದ್ದು, ಮರಗಳ ಸುತ್ತ ಹಾಗೂ ಸಮೂಹಗಳಲ್ಲಿ ಆಕರ್ಷಕವಾಗಿ ಜೋಡಿಸುವ ಕಾರ್ಯ ಚಾಲ್ತಿಯಲ್ಲಿದೆ ಎಂದು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande