ವಿಜಯಪುರ, 14 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಹಾಸ್ಯ ನಟ ರಾಜು ತಾಳಿಕೋಟಿ ಸ್ವ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ವಿಜಯಪುರ ಜಿಲ್ಲೆಯ ಸಿಂದಗಿ ಸ್ವಗ್ರಾಮ ಚಿಕ್ಕಸಿಂದಗಿ ಗ್ರಾಮದಲ್ಲಿ ನೀರ ಮೌನ ಆವರಿಸಿದ್ದು, ಕುಟುಂಬಸ್ಥರು, ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿದೆ.
ಚಿಕ್ಕಸಿಂದಗಿ ಗ್ರಾಮದ ರಾಜು ಅವರ ತೋಟದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
2 ಗಂಟೆಗಳ ಕಾಲ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು,
ನಂತರ ಸಂಬಂಧಿಕರು, ಅಭಿಮಾನಿಗಳು ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಿದ್ದಾರೆ.
ಚಿಕ್ಕಸಿಂದಗಿ ಗ್ರಾಮದ ಕಬರಸ್ಥಾನದಲ್ಲಿ ಮುಸ್ಲಿಂ ವಿಧಿವಿಧಾನದ ಪ್ರಕಾರ ಅಂತ್ಯಸಂಸ್ಕಾರ ನೆರವೇರಲಿದೆ.
ಸ್ಥಳದಲ್ಲಿ ಕುಟುಂಬಸ್ಥರ, ಅಭಿಮಾನಿಗಳ,ಕಲಾವಿದರು ಜಮಾಯಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande