ಉಡುಪಿ, 14 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಉಡುಪಿ ಜಿಲ್ಲೆಯ ಕಾರ್ಕಳದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸೋಮವಾರ ರಾತ್ರಿ ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆಕೊಟ್ಟು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಸುದೀಪ್ ಭಂಡಾರಿ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನಲ್ಲಿ ವೈನ್ ಶಾಪ್ ನಡೆಸುತ್ತಿದ್ದರು ಎಂದು ತಿಳಿದು ಬಂದಿದ್ದು , ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಪ್ರಾಥಮಿಕ ಮಾಹಿತಿಯ ಪ್ರಕಾರ, ಆರ್ಥಿಕ ಮುಗ್ಗಟ್ಟು ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಈ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa