ನವದೆಹಲಿ, 15 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ನಾಲ್ಕು ರಾಜ್ಯಗಳ ಐದು ಸ್ಥಾನಗಳಿಗೆ ನಡೆಯಲಿರುವ ವಿಧಾನ ಸಭಾ ಉಪಚುನಾವಣೆಗೆ ಭಾರತೀಯ ಜನತಾ ಪಕ್ಷ ಬುಧವಾರ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಒಬ್ಬ ಮುಸ್ಲಿಂ ಅಭ್ಯರ್ಥಿಯೂ ಸೇರಿದ್ದಾರೆ.
ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಬುಧವಾರ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಜಾರ್ಖಂಡ್‌ನ ಘಾಟ್‌ಶಿಲಾ (ಎಸ್‌ಟಿ) ಮೀಸಲು ಕ್ಷೇತ್ರದಿಂದ ಬಾಬುಲಾಲ್ ಸೊರೆನ್, ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಕ್ಷೇತ್ರದಿಂದ ಆಗಾ ಸೈಯದ್ ಮೊಹ್ಸಿನ್ ಮತ್ತು ನಾಗ್ರೋಟಾದಿಂದ ದೇವಯಾನಿ ರಾಣಾ ಅವರನ್ನು ಬಿಜೆಪಿ ಕಣಕ್ಕಿಳಿಸಿದ್ದು, ಜೈ ಧೋಲಾಕಿಯಾ ಅವರನ್ನು ಒಡಿಶಾದ ನುವಾಪಾದ ಕ್ಷೇತ್ರದಿಂದ ಮತ್ತು ತೆಲಂಗಾಣದ ಜುಬಿಲಿ ಹಿಲ್ಸ್ ಸ್ಥಾನದಿಂದ ಲಂಕಾಲಾ ದೀಪಕ್ ರೆಡ್ಡಿ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa