ಕೊಪ್ಪಳ, 15 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಜೆಸ್ಕಾಂ ಕೊಪ್ಪಳ ಉಪ ವಿಭಾಗ ವ್ಯಾಪ್ತಿಯಲ್ಲಿನ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ಪರಿಹರಿಸಲು ಅ.18 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕಾರ್ಯ ಮತ್ತು ಪಾಲನಾ ಉಪವಿಭಾಗ ಕಚೇರಿಯಲ್ಲಿ ವಿದ್ಯುತ್ ಗ್ರಾಹಕರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ವ್ಯಾಪ್ತಿಯ ವಿದ್ಯುತ್ ಗ್ರಾಹಕರು ಸಭೆಯಲ್ಲಿ ಪಾಲ್ಗೊಂಡು ವಿದ್ಯುತ್‌ಗೆ ಸಂಬ0ಧಿಸಿದ ತಮ್ಮ ದೂರು, ಅಹವಾಲುಗಳಿಗೆ ಪರಿಹಾರ ಪಡೆದುಕೊಳ್ಳಬಹುದು ಎಂದು ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್