ಅ.17 ರಂದು ಕೊಪ್ಪಳ ಜಿಲ್ಲಾ ಮಟ್ಟದ ಯುವಜನೋತ್ಸವ
ಕೊಪ್ಪಳ, 15 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕೊಪ್ಪಳ ಹಾಗೂ ರಾಜ್ಯ ಯುವ ಸಂಘಗಳ ಒಕ್ಕೂಟ (ರಿ), ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಕೊಪ್ಪಳ ಜಿಲ್ಲಾ ಮಟ್ಟದ ಯುವಜನೋತ್ಸವ 2025-26 ಕಾರ್ಯಕ್ರಮವನ್ನು ಅಕ್ಟೋಬರ್ 17ರ ಶುಕ್ರವಾ
ಅ.17 ರಂದು ಕೊಪ್ಪಳ ಜಿಲ್ಲಾ ಮಟ್ಟದ ಯುವಜನೋತ್ಸವ


ಕೊಪ್ಪಳ, 15 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕೊಪ್ಪಳ ಹಾಗೂ ರಾಜ್ಯ ಯುವ ಸಂಘಗಳ ಒಕ್ಕೂಟ (ರಿ), ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಕೊಪ್ಪಳ ಜಿಲ್ಲಾ ಮಟ್ಟದ ಯುವಜನೋತ್ಸವ 2025-26 ಕಾರ್ಯಕ್ರಮವನ್ನು ಅಕ್ಟೋಬರ್ 17ರ ಶುಕ್ರವಾರ ಬೆಳಿಗ್ಗೆ 10.30 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವವರು.

ಪ್ರತಿ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಮತ್ತು ಯಲಬುರ್ಗಾ ಶಾಸಕರಾದ ಬಸವರಾಜ ರಾಯರೆಡ್ಡಿ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು. ರಾಬಕೊವಿ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿಯಮಿತ, ಬಳ್ಳಾರಿಯ ಅಧ್ಯಕ್ಷರು ಹಾಗೂ ವಿಧಾನಸಭೆ ಸದಸ್ಯರು ಮತ್ತು ಕೊಪ್ಪಳ ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸುವರು.

ಮುಖ್ಯ ಅತಿಥಿಗಳಾಗಿ ಕೊಪ್ಪಳ ಲೋಕಸಭಾ ಸಂಸದ ಕೆ. ರಾಜಶೇಖರ ಬಸವರಾಜ್ ಹಿಟ್ನಾಳ, ಗಂಗಾವತಿ ಶಾಸಕ ಜಿ. ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ. ನಮೋಶಿ, ಡಾ. ಚಂದ್ರಶೇಖರ ಬಿ. ಪಾಟೀಲ್, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ, ಹೇಮಲತಾ ನಾಯಕ, ಮುನಿರಾಬಾದ್ ತುಂಗಭದ್ರಾ ಯೋಜನೆ ಮುನಿರಾಬಾದ್‌ನ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಸನಸಾಬ ನಬೀಸಾಬ ದೋಟಿಹಾಳ, ನಗರಸಭೆ ಅಧ್ಯಕ್ಷ ಅಮ್ಮದ್ ಪಟೇಲ್ ಎಸ್.ಎಂ. ಪಟೇಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ಶ್ರೀನಿವಾಸ ಗುಪ್ತಾ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಅವರು ಆಗಮಿಸುವರು.

ವಿಶೇಷ ಆಹ್ವಾನಿತರಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ನವೀನ್‌ರಾಜ್ ಸಿಂಗ್, ವಸತಿ ಇಲಾಖೆಯ ಕಾರ್ಯದರ್ಶಿ ಮತ್ತು ಕೃಷ್ಣಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರು, ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ, ಕೃಷ್ಣಾ ಮೇಲ್ದಂಡೆ ಯೋಜನೆ, ಬಾಗಲಕೋಟೆಯ ಆಯುಕ್ತರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ. ಮೋಹನ್‌ರಾಜ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರಾದ ಚೇತನ್ ಆರ್. ಆಗಮಿಸುವರು.

ವಿಶೇಷ ಅತಿಥಿಗಳಾಗಿ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಡಾ. ಬಿ.ಕೆ. ರವಿ ಹಾಗೂ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ (ರಿ) ಹಾಗೂ ಕನ್ನಡ ಜಾನಪದ ಪರಿಷತ್‌ನ ರಾಜ್ಯಾಧ್ಯಕ್ಷ ಡಾ. ಎಸ್. ಬಾಲಾಜಿ ಆಗಮಿಸುವರು.

ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲೆಯ ತೊಗಲುಗೊಂಬೆಯಾಟದ ಸಾಧನೆಗಾಗಿ 2025-26ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೇಕ್ಯಾತರ್ ಅವರನ್ನು ಸನ್ಮಾನಿಸಲಾಗುವುದು.

ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿಠ್ಠಲ್ ಬಿ. ಜಾಬಗೌಡರ ಹಾಗೂ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಜಿಲ್ಲಾ ಅಧ್ಯಕ್ಷ ಮಂಜುನಾಥ ಜಿ. ಗೊಂಡಬಾಳ, ಜಿಲ್ಲೆಯ ಎಲ್ಲ ತಾಲ್ಲೂಕುಗಳ ಸಹಾಯಕ ಕ್ರೀಡಾಧಿಕಾರಿಗಳು, ರಾಜ್ಯ ಹಾಗೂ ಜಿಲ್ಲಾ ಯುವ ಪ್ರಶಸ್ತಿ ಪುರಸ್ಕೃತರು, ಯುವ ಸಂಘಗಳ ಒಕ್ಕೂಟಗಳು ಹಾಗೂ ನೋಂದಾಯಿತ ಯುವ ಮಂಡಳಿಗಳು ಉಪಸ್ಥಿತರಿರುವರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande