ಪರಿಸರ ಸ್ನೇಹಿ ಹಸಿರು ಪಟಾಕಿ ಬಳಸಿ : ಜಿಲ್ಲಾಧಿಕಾರಿ ಕವಿತಾ.ಎಸ್.ಮನ್ನಿಕೇರಿ
ಹೊಸಪೇಟೆ, 15 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ದೀಪಾವಳಿಯನ್ನು ಸಾಂಪ್ರದಾಯಿಕವಾಗಿ ದೀಪಗಳನ್ನು ಬೆಳಗುವ ಮೂಲಕ ಸಂಭ್ರಮದಿoದ ಆಚರಿಸಿ, ವಾಡಿಕೆಯಂತೆ ಪಟಾಕಿ ಹಚ್ಚುವುದಾದರೇ ರಾಸಾಯನಿಕ ಪಟಾಕಿ ಕೈಬಿಡಿ, ಪರಿಸರ ಸ್ನೇಹಿ ಹಸಿರು ಪಟಾಕಿ ಬಳಸಿ ಎಂದು ಜಿಲ್ಲಾಧಿಕಾರಿ ಕವಿತಾ.ಎಸ್.ಮನ್ನಿಕೇರಿ ಸಲಹೆ ನೀಡಿದ್ದಾರೆ
ಪರಿಸರ ಸ್ನೇಹಿ ಹಸಿರು ಪಟಾಕಿ ಬಳಸಿ : ಜಿಲ್ಲಾಧಿಕಾರಿ ಕವಿತಾ.ಎಸ್.ಮನ್ನಿಕೇರಿ


ಹೊಸಪೇಟೆ, 15 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ದೀಪಾವಳಿಯನ್ನು ಸಾಂಪ್ರದಾಯಿಕವಾಗಿ ದೀಪಗಳನ್ನು ಬೆಳಗುವ ಮೂಲಕ ಸಂಭ್ರಮದಿoದ ಆಚರಿಸಿ, ವಾಡಿಕೆಯಂತೆ ಪಟಾಕಿ ಹಚ್ಚುವುದಾದರೇ ರಾಸಾಯನಿಕ ಪಟಾಕಿ ಕೈಬಿಡಿ, ಪರಿಸರ ಸ್ನೇಹಿ ಹಸಿರು ಪಟಾಕಿ ಬಳಸಿ ಎಂದು ಜಿಲ್ಲಾಧಿಕಾರಿ ಕವಿತಾ.ಎಸ್.ಮನ್ನಿಕೇರಿ ಸಲಹೆ ನೀಡಿದ್ದಾರೆ.

2018ರ ರಾಷ್ಟಿçಯ ಹಸಿರು ಪ್ರಾಧಿಕಾರದ ಆದೇಶದಂತೆ ಸಿಎಸ್‌ಐಆರ್ ಮತ್ತು ಎನ್‌ಇಇಆರ್‌ಐ ಅವರ ಶಿಫಾರಸ್ಸು ಮಾಡಿದ ಹಾಗೂ ಸರ್ವೋಚ್ಚ ನ್ಯಾಯಲಯ ಮಾಗದರ್ಶನದಂತೆ ಕಡ್ಡಾಯವಾಗಿ ಪರಿಸರ ಸ್ನೇಹಿ ಪಟಾಕಿಗಳನ್ನು ಬಳಸಬೇಕು. ಹಸಿರು ಪಟಾಕಿಗಳ ಮೇಲೆ ಹಾಗೂ ಅವುಗಳ ಪ್ಯಾಕೆಟ್ ಮೇಲೆ ಹಸಿರು ಪಟಾಕಿಯ ಚಿಹ್ನೆಯಿರುತ್ತದೆ ಹಾಗೂ ಕ್ಯೂಆರ್ ಕೋಡ್ ಸಹಾ ಇರುತ್ತದೆ.

ಚಿಹ್ನೆ ಇಲ್ಲದ ಪಟಾಕಿ ಹಸಿರು ಪಟಾಕಿಯೆನಿಸುವುದಿಲ್ಲ ಮತ್ತು ಅವುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ. ಪ್ರಮುಖವಾಗಿ ಹಸಿರು ಪಟಾಕಿ ತಯಾರಕರಿಗೆ ಹಾಗೂ ಮಾರಾಟಗಾರರಿಗೆ ಮಾತ್ರ ಅನುಮತಿ ನೀಡಲಾಗಿದೆ. ಪಟಾಕಿಗಳನ್ನು ಬಳಸುವಾಗ ಪ್ರಾಣಿ, ಪಕ್ಷಿಗಳು, ಮಕ್ಕಳು ಹಾಗೂ ವೃದ್ಧರಿಗೆ ತೊಂದರೆಯಾಗದAತೆ ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಸಮಯ ರಾತ್ರಿ 8 ಗಂಟೆಯಿAದ ರಾತ್ರಿ 10 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸ್ಪೋಟಿಸಲು ಅವಕಾಶ ನೀಡಲಾಗಿದೆ.

ಯಾವುದೇ ಸ್ಥಳೀಯ ಆಸ್ಪತ್ರೆ ಹಾಗೂ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತಲು ಹಾಗೂ ನಿಷೇಧಿತ ಪ್ರದೇಶದಲ್ಲಿ ಪಟಾಕಿಗಳನ್ನು ಸ್ಪೋಟಿಸುವಂತಿಲ್ಲ. ಈ ನಿಯಮವನ್ನು ಕಡ್ಡಾಯವಾಗಿ ಸಾರ್ವಜನಿಕರು ಪಾಲಿಸಬೇಕು. ಹೊರ ರಾಜ್ಯಗಳಿಂದ ಅನಧಿಕೃತವಾಗಿ ಯಾವುದೇ ರೀತಿಯ ನಿಷೇಧಿತ ಪಟಾಕಿಗಳು ಹಾಗೂ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದಲ್ಲಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವಂತೆ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande