ಪ್ರಧಾನಮಂತ್ರಿ ಗ್ರಾಮೀಣ ರಸ್ತೆ ಯೋಜನೆಗೆ 25 ವರ್ಷ : ಕೃಷಿ ಸಚಿವಾಲಯದಿಂದ ರಾಷ್ಟ್ರವ್ಯಾಪಿ ಕಾರ್ಯಕ್ರಮ
ನವದೆಹಲಿ, 16 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಪ್ರಧಾನ ಮಂತ್ರಿ ಗ್ರಾಮೀಣ ರಸ್ತೆ ಯೋಜನೆ ಈ ವರ್ಷದ ಡಿಸೆಂಬರ್‌ನಲ್ಲಿ 25 ವರ್ಷಗಳನ್ನು ಪೂರೈಸಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವಾಲಯ ದೇಶದಾದ್ಯಂತ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲು ತೀರ್ಮಾನಿಸಿದೆ. ಈ ಕುರಿತು
Chawan


ನವದೆಹಲಿ, 16 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಪ್ರಧಾನ ಮಂತ್ರಿ ಗ್ರಾಮೀಣ ರಸ್ತೆ ಯೋಜನೆ ಈ ವರ್ಷದ ಡಿಸೆಂಬರ್‌ನಲ್ಲಿ 25 ವರ್ಷಗಳನ್ನು ಪೂರೈಸಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವಾಲಯ ದೇಶದಾದ್ಯಂತ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲು ತೀರ್ಮಾನಿಸಿದೆ.

ಈ ಕುರಿತು ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಗುರುವಾರ ಕೃಷಿ ಭವನದಲ್ಲಿ ಉನ್ನತ ಮಟ್ಟದ ಸಭೆ ನಡೆಸಿ ಯೋಜನೆಯ ಪ್ರಗತಿಯನ್ನು ಪರಿಶೀಲಿಸಿದರು ಹಾಗೂ ಮುಂದಿನ ಕಾರ್ಯಯೋಜನೆ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಚೌಹಾಣ್ ಅವರು ಪೂರ್ವೋತ್ತರ ರಾಜ್ಯಗಳಲ್ಲಿ ಯೋಜನೆಗಳ ಅನುಷ್ಠಾನದ ಕುರಿತು ವಿಶೇಷ ಸಭೆ ನಡೆಸುವ ಕುರಿತು ಸೂಚಿಸಿದರು. ಈ ಸಭೆಯಲ್ಲಿ ಮುಖ್ಯಮಂತ್ರಿಗಳು ಹಾಗೂ ರಾಜ್ಯ ಪ್ರತಿನಿಧಿಗಳ ಸಹಭಾಗಿತ್ವದಲ್ಲಿ ಮನರೇಗಾ, ಕೌಶಲ್ಯಾಭಿವೃದ್ಧಿ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಸೇರಿದಂತೆ ಹಲವು ಯೋಜನೆಗಳ ಸಂಯೋಜಿತ ಪ್ರಗತಿ ಕುರಿತು ಚರ್ಚೆ ನಡೆಯಲಿದೆ.

ಸಭೆಯಲ್ಲಿ ಪ್ರಧಾನಮಂತ್ರಿ ಗ್ರಾಮೀಣ ರಸ್ತೆ ಯೋಜನೆಯ 25 ವರ್ಷಗಳ ಸಾಧನೆ ಕುರಿತು ರಾಷ್ಟ್ರವ್ಯಾಪಿ ಆಚರಣೆ ಮತ್ತು ವರದಿ ಬಿಡುಗಡೆ ಮಾಡಲು ನಿರ್ಧಾರ ಕೈಗೊಳ್ಳಲಾಯಿತು. ಯೋಜನೆಯು ಗ್ರಾಮೀಣ ಪ್ರದೇಶದ ಜನಜೀವನದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದೆ ಎಂದು ಚೌಹಾಣ್ ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande