ಹಾಸನ, 16 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈ ಭಾರತ್ ಕೇಂದ್ರ, ರಾಷ್ಟೀಯ ಸೇವಾ ಸಂಸ್ಥೆ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಹಾಸನ ನಗರದ ಹಾಸನಾಂಬ ಕಲಾಭವನ ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ಅ.30 ರಂದು 2025-26 ನೇ ಸಾಲಿನ ಹಾಸನ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಸಂಘಟನೆ ಮಾಡಲಾಗುತ್ತಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಸಾಲಗಾಮೆ ರಸ್ತೆ, ಹಾಸನ ಜಿಲ್ಲೆ ಇವರ ಕಚೇರಿ ದೂರವಾಣಿ ಸಂ: 08172–296256 ರಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa