ದುರ್ಗಾಪುರ ಅತ್ಯಾಚಾರ ಪ್ರಕರಣ ; ರಾಜ್ಯಪಾಲರಿಂದ ರಾಷ್ಟ್ರಪತಿ, ಗೃಹ ಸಚಿವಾಲಯಕ್ಕೆ ವರದಿ
ಕೋಲ್ಕತ್ತಾ, 16 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ದಲಿತ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಕುರಿತು ಪಶ್ಚಿಮ ಬಂಗಾಳ ರಾಜ್ಯಪಾಲ ಡಾ. ಸಿ.ವಿ. ಆನಂದ ಬೋಸ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಕೇಂದ್ರ ಗೃಹ ಸಚಿವಾಲಯಕ್ಕೆ ವಿವರವಾದ ವರದಿ
Report


ಕೋಲ್ಕತ್ತಾ, 16 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ದಲಿತ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಕುರಿತು ಪಶ್ಚಿಮ ಬಂಗಾಳ ರಾಜ್ಯಪಾಲ ಡಾ. ಸಿ.ವಿ. ಆನಂದ ಬೋಸ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಕೇಂದ್ರ ಗೃಹ ಸಚಿವಾಲಯಕ್ಕೆ ವಿವರವಾದ ವರದಿ ಸಲ್ಲಿಸಿದ್ದಾರೆ. ದುರ್ಗಾಪುರಕ್ಕೆ ಭೇಟಿ ನೀಡಿ ಸಂತ್ರಸ್ತೆಯ ಕುಟುಂಬವನ್ನು ಭೇಟಿಯಾದ ಬಳಿಕ ಈ ವರದಿ ತಯಾರಿಸಲಾಗಿದೆ.

ಅಕ್ಟೋಬರ್ 10ರ ರಾತ್ರಿ ಖಾಸಗಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದರು. ಪ್ರಕರಣದಲ್ಲಿ ಆರು ಮಂದಿ ಬಂಧಿತರಾಗಿದ್ದಾರೆ. ರಾಜ್ಯಪಾಲರು ಮಹಿಳೆಯರ ವಿರುದ್ಧ ಹೆಚ್ಚುತ್ತಿರುವ ಹಿಂಸಾಚಾರ ಕುರಿತು ಕಳವಳ ವ್ಯಕ್ತಪಡಿಸಿ, ರಾಜ್ಯದ ಆಡಳಿತ ಮತ್ತು ಪೊಲೀಸ್ ವ್ಯವಸ್ಥೆಯ ಕಾರ್ಯನಿರ್ವಹಣೆಗೆ ಅಸಮಾಧಾನ ವ್ಯಕ್ತಪಡಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande