ನವದೆಹಲಿ, 16 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ರಷ್ಯಾದಿಂದ ತೈಲ ಖರೀದಿಯನ್ನು ಭಾರತ ನಿಲ್ಲಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆ ಕುರಿತು ಲೋಕ ಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ಮೌನದ ಕುರಿತು ಟೀಕಿಸಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿ, “ಭಾರತ ರಷ್ಯಾದಿಂದ ತೈಲ ಖರೀದಿಸುವುದಿಲ್ಲ ಎಂದು ಟ್ರಂಪ್ ಹೇಳಲು ಹೇಗೆ ಅವಕಾಶ ಸಿಕ್ಕಿತು? ಪ್ರಧಾನಿ ಯಾವ ಕಾರಣಕ್ಕೆ ಮೌನವಾಗಿದ್ದಾರೆ? ಅವರು ಯಾವ ಕಾರಣಕ್ಕೆ ಭಯಪಡುತ್ತಿದ್ದಾರೆ?” ಎಂದು ಪ್ರಶ್ನಿಸಿದ್ದಾರೆ.
ಹಣಕಾಸು ಸಚಿವರ ಅಮೆರಿಕ ಭೇಟಿಯನ್ನು ಏಕೆ ಮುಂದೂಡಲಾಯಿತು, ಶರ್ಮ್ ಎಲ್-ಶೇಖ್ ಶೃಂಗಸಭೆಯಲ್ಲಿ ಭಾರತ ಭಾಗವಹಿಸದಿರುವುದಕ್ಕೆ ಕಾರಣವೇನು, ‘ಆಪರೇಷನ್ ಸಿಂಧೂರ್’ ಕುರಿತು ಟ್ರಂಪ್ ಅವರ ಹೇಳಿಕೆಗೆ ಪ್ರಧಾನಿ ಪ್ರತಿಕ್ರಿಯೆ ನೀಡದಿರುವುದನ್ನು ಪ್ರಶ್ನಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa