ಬಲೋತ್ರಾ, 16 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ರಾಜಸ್ಥಾನದ ಬಲೋತ್ರಾ ಜಿಲ್ಲೆಯ ಸದಾ ಗ್ರಾಮದ ಹೆದ್ದಾರಿಯಲ್ಲಿ ಬುಧವಾರ ತಡ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಟ್ರೇಲರ್ ಮತ್ತು ಸ್ಕಾರ್ಪಿಯೋ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮವಾಗಿ ಎರಡು ವಾಹನಗಳು ಬೆಂಕಿಗೆ ಆಹುತಿಯಾಗಿವೆ.
ಮೃತರನ್ನು ಮೋಹನ್ ಸಿಂಗ್ (35), ಶಂಭು ಸಿಂಗ್ (20), ಪಂಚರಾಮ್ (22) ಮತ್ತು ಪ್ರಕಾಶ್ (28) ಎಂದು ಗುರುತಿಸಲಾಗಿದೆ.
ಆಪಘಾತದಲ್ಲಿ ಸ್ಕಾರ್ಪಿಯೋ ಕಾರಿನ ಚಾಲಕ ದಿಲೀಪ್ ಸಿಂಗ್ ಗಂಭೀರ ಸುಟ್ಟಗಾಯಗಳಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa