ಕೊಪ್ಪಳ, 16 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಅಕ್ಟೋಬರ್ 29 ರಿಂದ 31 ರವರೆಗೆ ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಅವರು ಅಕ್ಟೋಬರ್ 28 ರಂದು ರಾತ್ರಿ 9.50 ಗಂಟೆಗೆ ಹಂಪಿ ಎಕ್ಸ್ಪ್ರೆಸ್ ರೈಲಿನ ಮೂಲಕ ಬೆಂಗಳೂರಿನಿ0ದ ಹೊರಟು, ಅಕ್ಟೋಬರ್ 29 ರಂದು ಬೆಳಿಗ್ಗೆ 7.43 ಗಂಟೆಗೆ ರೈಲು ಮಾರ್ಗದ ಮೂಲಕ ಕೊಪ್ಪಳಕ್ಕೆ ಆಗಮಿಸಿ ನಗರದ ಪ್ರವಾಸಿ ಮಂದಿರಕ್ಕೆ ತೆರಳುವರು. ಬೆಳಿಗ್ಗೆ 8.15 ಗಂಟೆಯಿ0ದ 9 ಗಂಟೆಯವರೆಗೆ ಉಪಹಾರದ ವಿರಾಮ. ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವರು. ಮಧ್ಯಾಹ್ನ 1.30 ಗಂಟೆಯಿ0ದ 2.30 ಗಂಟೆಯವರೆಗೆ ಪ್ರವಾಸಿ ಮಂದಿರದಲ್ಲಿ ಊಟದ ವಿರಾಮ. ಮಧ್ಯಾಹ್ನ 2.30 ಗಂಟೆಯಿ0ದ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವರು. ರಾತ್ರಿ 8.30 ಗಂಟೆಗೆ ಪ್ರವಾಸಿ ಮಂದಿರಕ್ಕೆ ಆಗಮಿಸುವರು.
ಅಕ್ಟೋಬರ್ 30 ರಂದು ಬೆಳಿಗ್ಗೆ 6.30 ಗಂಟೆಗೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸುವರು. ಬೆಳಿಗ್ಗೆ 10 ಗಂಟೆಯಿ0ದ ಮಧ್ಯಾಹ್ನ 1.30 ಗಂಟೆಯವರೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಸಾರ್ವಜನಿಕರ ದೂರು, ಅಹವಾಲು ಸ್ವೀಕರಿಸುವರು. ಮಧ್ಯಾಹ್ನ 1.30 ಗಂಟೆಯಿ0ದ 2.30 ಗಂಟೆಯವರೆಗೆ ಊಟದ ವಿರಾಮ. ಮಧ್ಯಾಹ್ನ 2.30 ಗಂಟೆಯಿ0ದ ಸಂಜೆ 5 ಗಂಟೆಯವರೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಸಾರ್ವಜನಿಕರ ದೂರು, ಅಹವಾಲು ಸ್ವೀಕರಿಸುವರು. ಸಂಜೆ 5.30 ರಿಂದ 6.30 ಗಂಟೆಯವರೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಹಯೋಗದೊಂದಿಗೆ ಹಮ್ಮಿಕೊಂಡಿರುವ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಕರ್ನಾಟಕ ಲೋಕಾಯುಕ್ತ ಕಾಯ್ದೆಯ ಬಗ್ಗೆ ಕಾನೂನು ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸುವರು. ರಾತ್ರಿ 8.30 ಗಂಟೆಗೆ ಪ್ರವಾಸಿ ಮಂದಿರಕ್ಕೆ ತೆರಳುವರು.
ಅಕ್ಟೋಬರ್ 31 ರಂದು ಬೆಳಿಗ್ಗೆ 6.30 ಗಂಟೆಗೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವರು. ಬೆಳಿಗ್ಗೆ 8.30 ಗಂಟೆಗೆ ಪ್ರವಾಸಿ ಮಂದಿರದಲ್ಲಿ ಉಪಹಾರದ ವಿರಾಮ. ಬೆಳಿಗ್ಗೆ 9.30 ಗಂಟೆಯಿ0ದ 10.45 ಗಂಟೆಯವರೆಗೆ ಜಿಲ್ಲಾ ನ್ಯಾಯಾಲಯದಲ್ಲಿ ನ್ಯಾಯಾಂಗದ ಅಧಿಕಾರಿಗಳು, ವಕೀಲರು ಹಾಗೂ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸುವರು.
ಬೆಳಿಗ್ಗೆ 11 ಗಂಟೆಯಿ0ದ ಮಧ್ಯಾಹ್ನ 1.45 ರವರೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಕೊಪ್ಪಳ ಜಿಲ್ಲೆಗೆ ಸಂಬ0ಧಿಸಿದ0ತೆ ಲೋಕಾಯುಕ್ತದಲ್ಲಿ ಬಾಕಿ ಇರುವ ಹಾಗೂ ಉಪಲೋಕಾಯುಕ್ತರ ವ್ಯಾಪ್ತಿಗೆ ಬರುವ ಪ್ರಕರಣಗಳಲ್ಲಿ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಪ್ರಕರಣಗಳ ವಿಚಾರಣೆ ನಡೆಸುವರು.
ಮಧ್ಯಾಹ್ನ 1.45 ಗಂಟೆಯಿ0ದ 2.30 ರವರೆಗೆ ಪ್ರವಾಸಿ ಮಂದಿರಲ್ಲಿ ಊಟದ ವಿರಾಮ. ಮಧ್ಯಾಹ್ನ 2.30 ರಿಂದ ಸಂಜೆ 6 ಗಂಟೆಯವರೆಗೆ ಪ್ರಕರಣಗಳ ವಿಚಾರಣೆಯನ್ನು ನಡೆಸುವರು. ಸಂಜೆ 7.30 ಗಂಟೆಗೆ ಪ್ರವಾಸಿ ಮಂದಿರದಲ್ಲಿ ಊಟದ ವಿರಾಮ. ಅಂದು ರಾತ್ರಿ 8 ಗಂಟೆಗೆ ಕೊಪ್ಪಳ ರೈಲ್ವೇ ನಿಲ್ದಾಣಕ್ಕೆ ತೆರಳಿ, 8.20 ಗಂಟೆಗೆ ಹಂಪಿ ಎಕ್ಸ್ಪ್ರೆಸ್ ರೈಲಿನ ಮುಖಾಂತರ ಕೊಪ್ಪಳದಿಂದ ಬೆಂಗಳೂರಿನ ಕಡೆ ಪ್ರವಾಸ ಬೆಳೆಸುವರು ಎಂದು ಕರ್ನಾಟಕ ಲೋಕಾಯುಕ್ತದ ರೆಜಿಸ್ಟಾçರ್ ಎಂ. ಚಂದ್ರಶೇಖರ ರೆಡ್ಡಿ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್