ನಾಳೆ ಲೀನ್ ಯೋಜನೆ ಮತ್ತು ಝಡ್.ಇ.ಡಿ ಹಾಗೂ ರಫ್ತು ಕುರಿತು ಒಂದು ದಿನ ಅರಿವು
ಬಳ್ಳಾರಿ, 17 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನಾ ಕೇಂದ್ರ (ವಿ.ಟಿ.ಪಿ.ಸಿ) ಹಾಗೂ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಇವರ ಸಹಯೋಗದಲ್ಲಿ “ಎಂ.ಎಸ್.ಎ0.ಇ ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತ
ಅ.18 ರಂದು ಲೀನ್ ಯೋಜನೆ ಮತ್ತು ಝಡ್.ಇ.ಡಿ ಹಾಗೂ ರಫ್ತು ಕುರಿತು ಒಂದು ದಿನ ಅರಿವು


ಬಳ್ಳಾರಿ, 17 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನಾ ಕೇಂದ್ರ (ವಿ.ಟಿ.ಪಿ.ಸಿ) ಹಾಗೂ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಇವರ ಸಹಯೋಗದಲ್ಲಿ “ಎಂ.ಎಸ್.ಎ0.ಇ ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವುದು” ಯೋಜನೆಯಡಿ ಲೀನ್ ಯೋಜನೆ ಮತ್ತು ಝಡ್.ಇ.ಡಿ ಹಾಗೂ ರಫ್ತು ಕುರಿತು ಒಂದು ದಿನ ಅರಿವು ಕಾರ್ಯಕ್ರಮವನ್ನು ನಾಳೆ ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಯಶವಂತರಾಜ್ ನಾಗಿರೆಡ್ಡಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕಾಸಿಯಾ ಅಧ್ಯಕ್ಷ ಗಣೇಶ ರಾವ್ ಬಿ.ಆರ್ ಅವರು ಅಧ್ಯಕ್ಷತೆ ವಹಿಸುವರು.

ಜಿಲ್ಲಾ ಹತ್ತಿ ಗಿರಣಿಗಳ ಸಂಘ ಅಧ್ಯಕ್ಷ ಡಿ.ತಿಪ್ಪಯ್ಯ, ಜಿಲ್ಲಾ ಕೈಗಾರಿಕಾ ಸಂಘದ ಅಧ್ಯಕ್ಷ ವಿ.ರಾಮಚಂದ್ರ, ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕ ಸೋಮಶೇಖರ್.ಬಿ., ವಿ.ಟಿ.ಪಿ.ಸಿ. ಧಾರವಾಡ ಶಾಖಾ ಕಚೇರಿ ಉಪ ನಿರ್ದೇಶಕ ಮಲ್ಲಿಕಾರ್ಜುನ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಈ ಸಂದರ್ಭದಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ, ಜಿಲ್ಲಾ ಕೈಗಾರಿಕಾ ಸಂಘ, ಜಿಲ್ಲಾ ಹತ್ತಿ ಗಿರಣಿಗಳ ಸಂಘಗಳ ಪದಾಧಿಕಾರಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಜಿಲ್ಲಾ ಕೈಗಾರಿಕಾ ಕೇಂದ್ರ ಸಿಬ್ಬಂದಿ ವರ್ಗದವರು ಉಪಸ್ಥಿತರಿರುವರು ಎಂದು ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande