ರಾಯಚೂರು, 17 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಅರ್ಹತಾ ದಿನಾಂಕ 01.11.2025ಕ್ಕೆ ಅನ್ವಯಸುವಂತೆ ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯನ್ನು ನೂತನವಾಗಿ ಸಿದ್ಧಪಡಿಸುವ ಕಾರ್ಯವು ಈಗಾಗಲೇ ಪ್ರಾರಂಭವಾಗಿದೆ. ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಸಹ ನಮೂನೆ 19ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಮತದಾರರ ನೋಂದಣಾಧಿಕಾರಿ ಆಗಿರುವ ಕುಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಜಹೀರಾ ನಸೀಮ ಅವರು ತಿಳಿಸಿದ್ದಾರೆ.
ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯನ್ನು ಸಿದ್ದಪಡಿಸಿಕೊಳ್ಳಲು ಈಗಾಗಲೇ ದಿನಾಂಕ:30.09.2025 ರಂದು ಸಾರ್ವಜನಿಕರ ಮಾಹಿತಿಗಾಗಿ ಪ್ರಚುರಪಡಿಸಲಾಗಿದ್ದು, ನಮೂನೆ 19ರಲ್ಲಿನ ಅರ್ಜಿಯನ್ನು ಸ್ವೀಕರಿಸಲು 2025ರ ನವಂಬರ್ 06 ಕೊನೆಯ ದಿನವಾಗಿರುತ್ತದೆ.
ಕರಡು ಮತದಾರರ ಪಟ್ಟಿಯನ್ನು 2025ರ ನವಂಬರ್ 25ರ ಮಂಗಳವಾರ ಪ್ರಕಟಣೆ ಮಾಡಲಾಗುತ್ತದೆ. ಹಕ್ಕು ಮತ್ತು ಆಕ್ಷೇಪಣೆಗಳಿಗಾಗಿ 2025ರ ನವಂಬರ್ 25ರ ಮಂಗಳವಾರದಿAದ 2025ರ ಡಿಸೆಂಬರ್ 10ರ ಬುಧವಾರದವರೆಗೆ ಅವಧಿ ನೀಡಲಾಗಿದೆ. ಅಂತಿಮ ಮತದಾರರ ಪಟ್ಟಿಯನ್ನು 2025ರ ಡಿಸೆಂಬರ್ 30ರ ಮಂಗಳವಾರ ದಂದು ಪ್ರಕಟಣೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಮಾರ್ಗಸೂಚಿಗಳು: ಭಾರತದ ಪ್ರಜೇಯಾಗಿರುವ, ಆಯಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಸಾಮಾನ್ಯ ನಿವಾಸಿಯಾಗಿರುವ ಹಾಗೂ 1ನೇ ನವೆಂಬರ್ 2025 ಕ್ಕೆ ಮೊದಲು 6 ವಷಗಳ ಅವಧಿಯಲ್ಲಿ ದರ್ಜೆಯಲ್ಲಿ ಪ್ರೌಢಶಾಲೆಗಿಂತ ಕಡಿಮೆ ಇಲ್ಲದ ನಿರ್ಧಿಷ್ಟಪಡಿಸಿದಂತಹ ರಾಜ್ಯದೊಳಗಿನ ಯಾವುದೇ ಶೈಕ್ಷಣಿಕ ಸಂಸ್ಥೆಗಳಲ್ಲಿ ಒಟ್ಟು ಕನಿಷ್ಠ 3 ವರ್ಷ ಬೋಧನಾ ವೃತ್ತಿಯಲ್ಲಿ ನಿರತವಾಗಿರುವ ಪ್ರತಿಯೊಬ್ಬ ವ್ಯಕ್ತಿಯು ಮತದಾರರ ಪಟ್ಟಿಯಲ್ಲಿ ತನ್ನ ಹೆಸರನ್ನು ಸೇರಿಸಲು ಅರ್ಹನಾಗಿರುತ್ತಾನೆ. ಹಾಗೇ ನಿರ್ಧಿಷ್ಟಪಡಿಸಿದ ಶೈಕ್ಷಣಿಕ ಸಂಸ್ಥೆಗಳ ಪಟ್ಟಿಯು ಮೊದಲನೇ ಅನುಸೂಚಿಯಲ್ಲಿ ತಿಳಿಸಲಾದ ಅಧಿಕಾರಿಗಳ ಬಳಿ ಇರುತ್ತದೆ.
ಖುದ್ದಾಗಿ ಅಥವಾ ಅಂಚೆ ಮುಖಾಂತರ ಒಟ್ಟಾರೆಯಾಗಿ ಸಲ್ಲಿಸಿದ (ಬಿಯುಎಲ್‌ಕೆ) ಅರ್ಜಿಗಳನ್ನು ಮತದಾರರ ನೋಂದಣಾಧಿಕಾರಿಯು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗಾಗಿ ಪರಿಗಣಿಸತಕ್ಕದ್ದಲ್ಲ. ಆದರೆ, ಸಂಸ್ಥೆಯ ಮುಖ್ಯಸ್ಥರು ಅವರ ಸಿಬ್ಬಂದಿಯವರ ಎಲ್ಲಾ ಅರ್ಜಿಗಳನ್ನು ಒಟ್ಟಾಗಿ ಮತದಾರರ ನೋಂದಣಾಧಿಕಾರಿಗಳಿಗೆ ಕಳುಹಿಸಬಹುದು. ಒಂದೇ ಕುಟಂಬದ ಎಲ್ಲಾ ಸದಸ್ಯರು ನಮೂನೆ 19 ರಲ್ಲಿ ಅರ್ಜಿಗಳನ್ನು ಕುಂಟುAಬದ ಯಾವುದಾದರೂ ಸದಸ್ಯರು ಸಲ್ಲಿಸಬಹುದು ಹಾಗೂ ಪ್ರತಿ ಸದಸ್ಯನಿಗೆ ಸಂಬAಧಿಸದAತೆ ಮೂಲ ಪ್ರಮಾಣ ಪತ್ರಗಳನ್ನು ಒದಗಿಸಿ, ಪ್ರಮಾಣ ಪತ್ರವನ್ನು ಪರಿಶೀಲಿಸಿಕೊಳ್ಳತಕ್ಕದ್ದು.
ಅರ್ಜಿದಾರರು ನಮೂನೆ-19 ರ ಅರ್ಜಿಯೊಂದಿಗೆ ಆಧಾರ ಕಾರ್ಡ್, ಚುನಾವಣಾ ಗುರುತಿನ ಚೀಟಿ ಹಾಗೂ ಬೀಳಿ ಬಣ್ಣದ ಹಿನ್ನೆಲೆ ಹೊಂದಿದ 2 ಪಾಸ್‌ಪೋರ್ಟ ಅಳತೆಯ ಭಾವಚಿತ್ರಗಳನ್ನು ಸಲ್ಲಿಸತಕ್ಕದ್ದು.
ಅರ್ಜಿದಾರರು ನಮೂನೆ-19ರೊಂದಿಗೆ ಲಗತ್ತಿಸಿದ ಆಧಾರ್ ಕಾರ್ಡನ ಗೌಪ್ಯತೆಯನ್ನು ಕಾಪಾಡುವ ದೃಷ್ಟಿಕೋನದಿಂದ ಆಧಾರ್ ಸಂಖ್ಯೆಯ ಪ್ರಥಮ 8 ಸಂಖ್ಯೆಯನ್ನು ಮಾಸ್ಕ್ ಮಾಡಲು ಹಾಗೂ ಅರ್ಜಿದಾರರ ಖಾಸಗಿತ್ವದ ದಾಖಲೆ ಹಾಗೂ ಮೊಬೈಲ್ ಸಂಖ್ಯೆಯನ್ನು ಯಾರಿಗೂ ನೀಡಬಾರದೆಂದು ಕಡ್ಡಾಯವಾಗಿ ಸೂಚಿಸಲಾಗಿರುತ್ತದೆ.
ಅರ್ಜಿಯಲ್ಲಿನ ತಪ್ಪು ಅಥವಾ ತಪ್ಪೆಂದು ಅವನು ತಿಳಿದಿರುವ ಅಥವಾ ನಂಬುವ0ತಹ ಅಥವಾ ಸತ್ಯವೆಂದು ನಂಬಲಾಗದಿರುವAತಹ ಹೇಳಿಕೆಗಳನ್ನು ಅಥವಾ ಘೋಷಣೆಗಳನ್ನು ಮಾಡುವ ಯಾವುದೇ ವ್ಯಕ್ತಿಯನ್ನು ಪ್ರಜಾಪ್ರಾತಿನಿಧ್ಯ ಅಧಿನಿಯಮ 1950ರ 31ನೇ ಪ್ರಕರಣದ ಮೇರೆಗೆ ಶಿಕ್ಷೆಗೆ ಗುರಿಪಡಿಸಲಾಗುವುದೆಂಬುದನ್ನು ಗಮನಿಸತಕ್ಕದ್ದು.
ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಬಯಸುವ ಪ್ರತಿಯೊಬ್ಬರು ಅರ್ಜಿ ನಮೂನೆ 19 ನ್ನು ಭರ್ತಿಮಾಡಿ ಅದರೊಂದಿಗೆ ಶೈಕ್ಷಣಿಕ ಸಂಸ್ಥೆಗಳಲ್ಲಿ 1 ನೇ ನವೆಂಬರ್ 2025 ಕ್ಕೆ ಮೊದಲು 6 ವರ್ಷಗಳ ಅವಧಿಯಲ್ಲಿ ಒಟ್ಟು ಕನಿಷ್ಟ 3 ವರ್ಷ ಭೋದನಾ ವೃತಿಯಲ್ಲಿ ನಿರತವಾಗಿರುವ ಬಗ್ಗೆ ಶೈಕ್ಷಣಿಕ ಸಂಸ್ಥೆಗಳಿAದ ಅನುಬಂಧ-2 ರಲ್ಲಿ ಸಂಬಳ ಬಟವಾಡೆ ಅಧಿಕಾರಿಯಿಂದ ಪ್ರಮಾಣ ಪತ್ರ ಸಲ್ಲಿಸತಕ್ಕದ್ದು. ಆಯೋಗವು ದಿನಾಂಕ:25.10.2021 ರಂದು ನೀಡಿದ ಮಾರ್ಗಸೂಚಿಗನುಗುಣವಾಗಿ ಅರ್ಹ ಮತದಾರರು ಅವರು ಕಾರ್ಯನಿರ್ವಹಿಸುತ್ತಿರುವ ಸ್ಥಳದಲ್ಲಿ ನೋಂದಾಯಿಸಕೂಡದೆ0ದು ತಿಳಿಸುತ್ತಾ, ಅವರು ಸಾಮಾನ್ಯ ನಿವಾಸಿಯಾಗಿ ವಾಸಿಸುತ್ತಿರುವ ಸ್ಥಳೀಯ ಕ್ಷೇತ್ರದಲ್ಲಿ ಅವರ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲು ತಿಳಿಸಿದೆ.
ಈ ಕ್ಷೇತ್ರ ವ್ಯಾಪ್ತಿಯ ಹೊರಗಡೆ ಸೆಕಂಡರಿ ಶಿಕ್ಷಣ ಸಂಸ್ಥೆ ಕಡಿಮೆ ಇಲ್ಲದ ಶಿಕ್ಷಣ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಿ ಮತದಾರನಾಗಲು ಆಯೋಗದ ಮಾರ್ಗಸೂಚಿಗಳನ್ನು ಪೂರೈಸಿ ಅವರು ಈ ಚುನಾವಣಾ ಕ್ಷೇತ್ರ ವ್ಯಾಪ್ತಿಯ ಸಾಮಾನ್ಯ ನಿವಾಸಿಯಾಗಿ ಇದಕ್ಕೆ ಪೂರಕವಾಗಿರುವಂತಹ ದಾಖಲೆಗಳನ್ನು ಅರ್ಜಿಯೊಂದಿಗೆ ಸಲ್ಲಿಸಿದ್ದಲ್ಲಿ ಅಂತಹ ಅರ್ಜಿದಾರರು ಮತದಾರರ ಪಟ್ಟಿಯಲ್ಲಿ ನೋಂದಣಿಗಾಗಿ ಅರ್ಹರಿರುತ್ತಾರೆ.
ಆಯೋಗವು ಮುಂಬರುವ ದಿನಗಳಲ್ಲಿ ಈ ನಮೂನೆ 19ರ ಅರ್ಜಿಗಳನ್ನು ಇಆರ್‌ಎಮ್‌ಎಸ್‌ನಲ್ಲಿ ಅಳವಡಿಸಲು ಉದ್ದೇಶಿಸಿರುತ್ತಾರೆ. ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತದ ಮತದಾರರ ಪಟ್ಟಿ ಸಿದ್ದಪಡಿಸಿಕೊಳ್ಳುವ ಕುರಿತು ಹಾಗೂ ಚುನಾವಣಾ ಪೂರ್ವ ತಯಾರಿ ಮಾಡಿಕೊಳ್ಳುವಂತೆ ಈಗಾಗಲೇ ವಿಭಾಗದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮತ್ತು ಸಂಬAಧಪಟ್ಟವರಿಗೆ ಈ ಕಾರ್ಯಾಲಯದಿಂದ ನಿರ್ದೇಶನ ನೀಡಲಾಗಿದೆ.
ಕರ್ನಾಟಕ ಈಶಾನ್ಯ ಶಿಕ್ಷಕರ ಮತದಾರರ ಪಟ್ಟಿಗೆ ಆಕ್ಷೇಪಣೆಗಳು ಇದ್ದಲ್ಲಿ ಮತದಾರರ ನೋಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಮತ್ತು ಸಂಬ0ಧಪಟ್ಟ ವಿಧಾನಸಭಾ ಮತಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಾರ್ಯಾಲಯದಲ್ಲಿ (ಮಹಾನಗರ ಪಾಲಿಕೆ ಹಾಗೂ ತಹಸೀಲ್ ಕಾರ್ಯಾಲಯದಲ್ಲಿ) ನಿಗದಿಪಡಿಸಿದ ಕಾಲಮಿತಿಯೊಳಗೆ ಸಲ್ಲಿಸತಕ್ಕದ್ದು.
ಅರ್ಹ ಶಿಕ್ಷಕರು ಹೆಚ್ಚಿನ ಆಸಕ್ತಿ ವಹಿಸಿ ಈ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊ0ಡು, ಸುಭದ್ರ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳಬೇಕೆಂದು ಎಲ್ಲಾ ಅರ್ಹ ಮತದಾರರಲ್ಲಿ ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಮತದಾರರ ನೋಂದಣಾಧಿಕಾರಿ ಆಗಿರುವ ಕುಲಬುರಗಿ ಪ್ರಾದೇಶಿಕ ಆಯುಕ್ತರಾದ ಜಹೀರಾ ನಸೀಮ ಅವರು ಕೋರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್