ತುಂಗಭದ್ರ ಜಲಾಶಯದ ಹೂಳು ತೆಗೆಯಲು ಮನವಿ
ಬಳ್ಳಾರಿ, 17 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ 9 ಜಿಲ್ಲೆಗಳ 16 ಲಕ್ಷ ಎಕರೆ ಭೂಮಿಗೆ ನೀರು, ಕುಡಿಯುವ ನೀರು ಮತ್ತು ಕೈಗಾರಿಕೆಗಳಿಗೆ ನೀರುಗಣಿಸುತ್ತಿರುವ ತುಂಗಭದ್ರಾ ಜಲಾಶಯದಲ್ಲಿ ಸಂಗ್ರಹವಾಗಿರುವ 33 ಟಿಎಂಸಿ ಹೊಳನ್ನು ತೆಗೆಯಲು ಕೋರಿ ತುಂಗಭದ್ರ
ತುಂಗಭದ್ರ ಜಲಾಶಯದ ಹೂಳು ತೆಗೆಯಲು ಮನವಿ


ತುಂಗಭದ್ರ ಜಲಾಶಯದ ಹೂಳು ತೆಗೆಯಲು ಮನವಿ


ಬಳ್ಳಾರಿ, 17 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ 9 ಜಿಲ್ಲೆಗಳ 16 ಲಕ್ಷ ಎಕರೆ ಭೂಮಿಗೆ ನೀರು, ಕುಡಿಯುವ ನೀರು ಮತ್ತು ಕೈಗಾರಿಕೆಗಳಿಗೆ ನೀರುಗಣಿಸುತ್ತಿರುವ ತುಂಗಭದ್ರಾ ಜಲಾಶಯದಲ್ಲಿ ಸಂಗ್ರಹವಾಗಿರುವ 33 ಟಿಎಂಸಿ ಹೊಳನ್ನು ತೆಗೆಯಲು ಕೋರಿ ತುಂಗಭದ್ರ ರೈತ ಸಂಘ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಸಲ್ಲಿಸಿದೆ.

ತುಂಗಭದ್ರ ರೈತ ಸಂಘದ ಅಧ್ಯಕ್ಷ ಡಾ. ಪುರುಷೋತ್ತಮಗೌಡ ಅವರ ನೇತೃತ್ವದಲ್ಲಿ ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಸಲ್ಲಿಸಿ, ತ್ವರಿತವಾಗಿ ಕ್ರಮಕೈಗೊಳ್ಳಲು ಮನವಿ ಮಾಡಲಾಯಿತು.

ಆಗ, ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಕೇಂದ್ರ ನೀರಾವರಿ ಆಯೋಗದ ಜೊತೆ ಈ ಕುರಿತು ಚರ್ಚೆ ನಡೆಸಿ,

ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯದ ನೀರಾವರಿ ತಜ್ಞರ - ನೀರಾವರಿ ಇಲಾಖಾ ಸಚಿವರು ಮತ್ತು ಅಧಿಕಾರಿಗಳ ಸಭೆ ನಡೆಸಿ, ತುಂಗಭದ್ರಾ ಜಲಾಶಯದಲ್ಲಿ ಸಂಗ್ರಹವಾಗಿರುವ ಹೂಳನ್ನು ತೆಗೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗುತ್ತದೆ ಎಂದು ರೈತ ಸಂಘಕ್ಕೆ ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಶಾಸಕ ಜಿ. ಸೋಮಶೇಖರರೆಡ್ಡಿ ಇನ್ನಿತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande