ಹೊಸಪೇಟೆ : ಸ್ವಯಂ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ
ಹೊಸಪೇಟೆ, 17 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಕೇಂದ್ರದಿಂದ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಅಹ್ವಾನಿಸಲಾಗಿದೆ ಎಂದು ಆರ್‌ಎಸ್‌ಇಟಿಐ ನಿರ್ದೇಶಕ ಗಿರಿಧರ್ ತಿಳಿಸಿದ್ದಾರೆ. ವಿಜಯನಗರ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತ ನಿರುದ್ಯೋಗಿ
ಹೊಸಪೇಟೆ : ಸ್ವಯಂ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ


ಹೊಸಪೇಟೆ, 17 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಕೇಂದ್ರದಿಂದ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಅಹ್ವಾನಿಸಲಾಗಿದೆ ಎಂದು ಆರ್‌ಎಸ್‌ಇಟಿಐ ನಿರ್ದೇಶಕ ಗಿರಿಧರ್ ತಿಳಿಸಿದ್ದಾರೆ.

ವಿಜಯನಗರ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತ ನಿರುದ್ಯೋಗಿ ಯುವಕ, ಯುವತಿಯರಿಗೆ ಮಹಿಳಾ ಹೊಲಿಗೆ ತರಬೇತಿ 31 ದಿನಗಳು, ಜೂಟ್ ಬ್ಯಾಗ್ ತರಬೇತಿ (13 ದಿನಗಳು), ಕೈ ಕಸೂತಿ ಮತ್ತು ವಸ್ತು ಚಿತ್ರ ಕಲಾ ಉದ್ಯಮಿ (31 ದಿನಗಳು), ಕುರಿ ಸಾಕಾಣಿಕೆ (31 ದಿನಗಳು), ಟ್ರಾವೆಲ್ ಆಂಡ್ ಟೂರಿಸ್ಟ್ (12 ದಿನ) ಗಳ ವರಗೆ ತರಬೇತಿ ನೀಡಲಾಗುತ್ತದೆ. ಆಸಕ್ತ ಅರ್ಜಿದಾರರು ವಿಜಯನಗರ ಜಿಲ್ಲೆಯ ಗ್ರಾಮೀಣ ಭಾಗದವರಾಗಿರಬೇಕು.

ಕನಿಷ್ಠ 8ನೇ ತರಗತಿ ಉತ್ತೀರ್ಣರಾಗಿರಬೇಕು. ವಯೋಮಿತಿ 18 ರಿಂದ 45 ವರ್ಷದೊಳಗಿರಬೇಕು. ಸ್ವಯಂ ಉದ್ಯೋಗದಲ್ಲಿ ಆಸಕ್ತಿಯನ್ನು ಹೊಂದಿರಬೇಕು. ಅರ್ಜಿ ಸಲ್ಲಿಸಲು ಆಧಾರ ಕಾರ್ಡ್, ರೇಷನ್ ಕಾರ್ಡ್, ಅಂಕಪಟ್ಟಿ ಜೆರಾಕ್ಸ್ ಪ್ರತಿಯೊಂದಿಗೆ 3 ಪಾಸ್‌ಪೋರ್ಟ್ ಸೈಜ್ ಪೋಟೋಗಳೊಂದಿಗೆ ನಿರ್ದೇಶಕರ ಕಚೇರಿ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣ, ಪೈ ಹೋಟೆಲ್ ಎದರುಗಡೆ, ಬಸ್ ನಿಲ್ದಾಣ ಹತ್ತಿರ ಹೊಸಪೇಟೆ. ವಿಳಾಸಕ್ಕೆ ಅರ್ಜಿಗಳನ್ನು ಸಲ್ಲಿಸಬೇಕು.

ಆಸಕ್ತ ಅರ್ಹರು ನವಂಬರ್.14 ರಂದು ಸಂದರ್ಶನಕ್ಕೆ ಭಾಗವಹಿಸಬೇಕು. ನವಂಬರ್ 15 ರಿಂದ ತರಬೇತಿಗಳು ಪ್ರಾರಂಭವಾಗಲಿವೆ. ಹೆಚ್ಚಿನ ಮಾಹಿತಿಗಾಗಿ ಮೊ.9741987137, ಮತ್ತು 6360467102, 9663471468 ಸಂಪರ್ಕಿಸಲು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande