ಕೊಪ್ಪಳ, 17 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಹಿರೇಕಾಸನಕಂಡಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ (ಹಿ.ವರ್ಗ-609) ಯಲ್ಲಿ ವಿಜ್ಞಾನ ಶಿಕ್ಷಕರ ಹುದ್ದೆ ಖಾಲಿ ಇದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಿದೆ.
ಬಿಎಸ್‌ಸಿ, ಬಿ.ಇಡಿ(ಸಿಬಿಝಡ್) ವಿದ್ಯಾರ್ಹತೆ ಹಾಗೂ ಟಿಇಟಿ ಆದವರಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಆಸಕ್ತರು ಅಕ್ಟೋಬರ್ 24 ರೊಳಗಾಗಿ ಅರ್ಜಿಯನ್ನು ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಿರೇಕಾಸನಕಂಡಿ, ಅಶೋಕ ರೈಸ್ ಮಿಲ್, ಗದಗ ರೋಡ್, ಕೊಪ್ಪಳ ಇಲ್ಲಿಗೆ ಸಲ್ಲಿಸಲು ಸೂಚಿಸಿದೆ.
ಹೆಚ್ಚಿನ ಮಾಹಿತಿಗಾಗಿ ಮಂಜುನಾಥ ಬೇಳೂರು, ಪ್ರಾಂಶುಪಾಲರು ಮೊ. ನಂ: 9482326285 ಇವರನ್ನು ಸಂಪರ್ಕಿಸಬಹುದು ಎಂದು ಶಾಲೆಯ ಪ್ರಾಂಶುಪಾಲರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್