ಬಳ್ಳಾರಿಯಲ್ಲಿ ನವೆಂಬರ್ 4 ರಿಂದ ಸೇನಾ ನೇಮಕಾತಿ ರ‍್ಯಾಲಿ
ಬಳ್ಳಾರಿ, 17 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ನವೆಂಬರ್ 04 ರಿಂದ 11 ರವರೆಗೆ ಬಳ್ಳಾರಿ ಜಿಲ್ಲೆಯಲ್ಲಿ ನಡೆಯಲಿರುವ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿಯನ್ನು ಅಚ್ಚುಕಟ್ಟಾಗಿ, ಶಿಸ್ತುಬದ್ಧವಾಗಿ ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ. ಜಿಲ್ಲಾಧಿಕಾರಿಗ
ಬಳ್ಳಾರಿಯಲ್ಲಿ ನವೆಂಬರ್ 4 ರಿಂದ ಸೇನಾ ನೇಮಕಾತಿ ರ‍್ಯಾಲಿ


ಬಳ್ಳಾರಿ, 17 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ನವೆಂಬರ್ 04 ರಿಂದ 11 ರವರೆಗೆ ಬಳ್ಳಾರಿ ಜಿಲ್ಲೆಯಲ್ಲಿ ನಡೆಯಲಿರುವ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿಯನ್ನು ಅಚ್ಚುಕಟ್ಟಾಗಿ, ಶಿಸ್ತುಬದ್ಧವಾಗಿ ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಶುಕ್ರವಾರ ನಡೆದ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿ ಕುರಿತ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಸೇನಾ ನೇಮಕಾತಿ ರ‍್ಯಾಲಿಯಲ್ಲಿ ಯಾವುದೇ ರೀತಿಯ ಲೋಪವಾಗದಂತೆ ಎಚ್ಚರ ವಹಿಸಬೇಕು. ವಿವಿಧ ಸಮಿತಿಗಳಲ್ಲಿನ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಮೇಲ್ವಿಚಾರಣೆ ಮಾಡಬೇಕು. ತಮ್ಮ ತಮ್ಮ ಜವಾಬ್ದಾರಿಗಳನ್ನು - ರ‍್ತವ್ಯಗಳನ್ನು ಅಚ್ಚುಕಟ್ಟಾಗಿ ನರ‍್ವಹಿಸಬೇಕು ಎಂದರು.

ರ‍್ಯಾಲಿಯಲ್ಲಿ ವೇದಿಕೆ, ಆಸನ ವ್ಯವಸ್ಥೆ, ವಿದ್ಯುತ್ ದೀಪಗಳ ವ್ಯವಸ್ಥೆ, ಮೈದಾನದಲ್ಲಿ ಬ್ಯಾರಿಕೇಡ್ ವ್ಯವಸ್ಥೆ, ವಿದ್ಯುತ್ ದೀಪ ಮತ್ತು ಜನರೇಟರ್ ವ್ಯವಸ್ಥೆ, ಆಸನ, ಕರ‍್ಚಿಗಳು, ಟೇಬಲ್‍ಗಳು, ಮೈಕ್‍ಸೆಟ್ ಮತ್ತು ಹಾಸಿಗೆ ಹಾಗೂ ತ್ಯಾಜ್ಯದ ತೊಟ್ಟಿಗಳ ವ್ಯವಸ್ಥೆ, ಬಿಎಸ್‍ಎನ್‍ಎಲ್ ಬ್ರಾಡ್‍ಬ್ಯಾಂಡ್ ಇಂರ‍್ನೆಟ್ ಜೊತೆಗೆ ವೈಫೈ ಮತ್ತು ಟೆಲಿಫೆÇೀನ್, ಎಲ್‍ಎಎನ್ ಸಂರ‍್ಕ, ಫೈಬರ್ ಕೇಬಲ್ ಜೊತೆಗೆ ಟೆಕ್ನಿಕಲ್ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ನರ‍್ದೇಶನ ನೀಡಿದರು.

ಸೇನಾ ನೇಮಕಾತಿ ರ‍್ಯಾಲಿಯಲ್ಲಿ ಭಾಗವಹಿಸುವ ಅಭ್ರ‍್ಥಿಗಳಿಗೆ ಊಟ ಉಪಹಾರದ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಜಿಲ್ಲಾ ಕ್ರೀಡಾಂಗಣದ ಸುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ದಾಖಲಾತಿ ಪರಿಶೀಲನೆ ಮತ್ತು ದೈಹಿಕ ಪರೀಕ್ಷೆಯು ಶಿಸ್ತುಬದ್ಧವಾಗಿ ನಡೆಯುವಂತೆ ಈ ಕುರಿತು ಸಂಬಂಧಿಸಿದ ಸಮಿತಿ ಪಾರರ‍್ಶಕವಾಗಿ ನರ‍್ವಹಣೆ ಮಾಡಬೇಕು. ರ‍್ಯಾಲಿಯ ಕುರಿತು ವ್ಯಾಪಕ ಪ್ರಚಾರ ನೀಡಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಹೆಚ್ಚುವರಿ ಪೆÇಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಸೇನಾ ನೇಮಕಾತಿಯ ಅಧಿಕಾರಿಗಳಾದ ರ‍್ನಲ್ ವಿವೇಕ್ ಜಮಿಂದಾರ್, ಮೇಜರ್ ಕಪಿಲ್ ಕೆ. ಸೇರಿದಂತೆ ಬಿಎಸ್‍ಎನ್‍ಎಲ್, ಅಗ್ನಿಶಾಮಕ, ಲೋಕೋಪಯೋಗಿ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande