ಪಾಟ್ನಾ, 17 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಬಿಹಾರ ವಿಧಾನ ಸಭಾ ಚುನಾವಣಾ ಪ್ರಚಾರಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಎರಡು ದಿನ ಪಾಟ್ನಾದಲ್ಲಿ ವಾಸ್ತವ್ಯ ಹೂಡಿದ್ದಾರೆ. ಕಳೆದ ರಾತ್ರಿ ಬಿಜೆಪಿ ರಾಜ್ಯ ನಾಯಕರೊಂದಿಗೆ ಸಭೆ ನಡೆಸಿ, ಚುನಾವಣಾ ಸಿದ್ಧತೆಗಳ ಕುರಿತು ಸಮಾಲೊಚನೆ ನಡೆಸಿದ್ದಾರೆ.
ಇಂದು ಸರನ್ ಜಿಲ್ಲೆಯ ತರೈಯಾದಲ್ಲಿ ಮೊದಲ ಸಾರ್ವಜನಿಕ ರ್ಯಾಲಿಯಲ್ಲಿ ಭಾಗವಹಿಸಲಿದ್ದು, ನಂತರ ಪಾಟ್ನಾದ ಜ್ಞಾನ ಭವನದಲ್ಲಿ ಬುದ್ಧಿಜೀವಿಗಳ ಸಮ್ಮೇಳನ ಹಾಗೂ ಪಕ್ಷದ ಚುನಾವಣಾ ನಿರ್ವಹಣಾ ಸಮಿತಿಯ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa