ಜಿಲ್ಲಾ ಮಟ್ಟದ ಅಧಿಕಾರಿಗಳು ನಿಕ್ಷಯ್ ಮಿತ್ರರಾಗಿ ಕೈಜೋಡಿಸಲು ಜಿಲ್ಲಾಧಿಕಾರಿಗಳ ಮನವಿ
ಕೊಪ್ಪಳ, 17 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಜಿಲ್ಲೆಯ ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿಗಳು ಸ್ವ ಇಚ್ಛೆಯಿಂದ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿಗಳ ಸಹಯೋಗದೊಂದಿಗೆ ಚಿಕಿತ್ಸೆಯನ್ನು ಪಡೆಯುತ್ತಿರುವ ಕ್ಷಯರೋಗಿಗಳನ್ನು 6 ತಿಂಗಳ ಕಾಲ ಪೌಷ್ಠಿಕ ಆಹಾರ ನೀಡುವ ಮೂಲಕ ದತ್ತು ಪಡೆದು ನಿಕ್ಷಯ್ ಮಿತ್ರರಾಗುವ
ಜಿಲ್ಲಾ ಮಟ್ಟದ ಅಧಿಕಾರಿಗಳು ನಿಕ್ಷಯ್ ಮಿತ್ರರಾಗಿ ಕೈಜೋಡಿಸಲು ಜಿಲ್ಲಾಧಿಕಾರಿಗಳ ಮನವಿ


ಕೊಪ್ಪಳ, 17 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಜಿಲ್ಲೆಯ ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿಗಳು ಸ್ವ ಇಚ್ಛೆಯಿಂದ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿಗಳ ಸಹಯೋಗದೊಂದಿಗೆ ಚಿಕಿತ್ಸೆಯನ್ನು ಪಡೆಯುತ್ತಿರುವ ಕ್ಷಯರೋಗಿಗಳನ್ನು 6 ತಿಂಗಳ ಕಾಲ ಪೌಷ್ಠಿಕ ಆಹಾರ ನೀಡುವ ಮೂಲಕ ದತ್ತು ಪಡೆದು ನಿಕ್ಷಯ್ ಮಿತ್ರರಾಗುವಂತೆ ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರು ಮನವಿ ಮಾಡಿದ್ದಾರೆ.

ಜಿಲ್ಲೆಯಲ್ಲಿ ಪ್ರತಿ ವರ್ಷ ಸುಮಾರು 2800 ರಿಂದ 3000 ಕ್ಷಯರೋಗಿಗಳು ಪತ್ತೆಯಾಗುತ್ತಿದ್ದಾರೆ. ಕ್ಷಯರೋಗವು ಮಾರಣಾಂತಿಕ ರೋಗವಾಗಿದ್ದು, ಈ ರೋಗವು ಅಪೌಷ್ಠಿಕತೆಯಿಂದ ಬಳಲುತ್ತಿರುವ ಜನರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತಿದೆ. ಆದ್ದರಿಂದ ಜಿಲ್ಲೆಯ ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು ಕ್ಷಯರೋಗಿಯನ್ನು ದತ್ತು ಪಡೆದು 6 ತಿಂಗಳ ಕಾಲ ಪೌಷ್ಠಿಕ ಆಹಾರವನ್ನು ನೀಡುವ ಮೂಲಕ ಕ್ಷಯರೋಗಿಗಳ ಮರಣ ಪ್ರಮಾಣ ಮತ್ತು ಅನಾರೋಗ್ಯದ ಪ್ರಮಾಣವನ್ನು ಕಡಿಮೆಗೊಳಿಸುವ ಮೂಲಕ ಜಿಲ್ಲೆಯನ್ನು ಕ್ಷಯಮುಕ್ತ ಜಿಲ್ಲೆಯನ್ನಾಗಿಸಬೇಕು. ಇದು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ನಿಕ್ಷಯ್ ಮಿತ್ರರಾಗಿ ತಮ್ಮ ಸಹಾಯ ಮತ್ತು ಸಹಕಾರವನ್ನು ನೀಡಿ ರಾಷ್ಟಿçಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮಕ್ಕೆ ಕೈಜೋಡಿಸುವಂತೆ ಜಿಲ್ಲಾಧಿಕಾರಿಗಳು ಕೋರಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande