ಕೊಪ್ಪಳ, 17 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಕೊಪ್ಪಳ ಜಿಲ್ಲೆಯ 5-ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಅಂತಿಮವಾಗಿ ಆಯ್ಕೆಗೊಂಡ 80 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 335 ಅಂಗನವಾಡಿ ಸಹಾಯಕಿಯರ ಅಭ್ಯರ್ಥಿಗಳ ಪಟ್ಟಿಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಉಪನಿರ್ದೇಶಕರ ಕಚೇರಿ ಹಾಗೂ ಜಿಲ್ಲಾ ಜಾಲತಾಣ www.koppal.nic.in ನಲ್ಲಿ ಪ್ರಕಟಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್