ಬಳ್ಳಾರಿ, 17 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕಿತ್ತೂರು ರಾಣಿ ಚೆನ್ನಮ್ಮನವರ ಜಯಂತಿಯನ್ನು ಅಕ್ಟೋಬರ್ 23ರಂದು ವಿಜೃಂಭಣೆಯಿ0ದ ಆಚರಿಸಲು ಅಗತ್ಯ ಸಿದ್ಧತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಭಜಂತ್ರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಅಕ್ಟೋಬರ್ 17ರ ಶುಕ್ರವಾರ ದಂದು ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಕ್ಟೋಬರ್ 23ರಂದು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ಜಿಲ್ಲಾ ರಂಗಮ0ದಿರದಲ್ಲಿ ನಡೆಯುವ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯ ವೇದಿಕೆಯ ಕಾರ್ಯಕ್ರಮಕ್ಕೆ ಸಮಾಜದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದರು. ಅಂದು ಎಲ್ಲಾ ಇಲಾಖೆಗಳ ರಾಯಚೂರು ಜಿಲ್ಲಾ ಹಾಗೂ ರಾಯಚೂರು ತಾಲೂಕುಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯ ಹಾಜರಿರಬೇಕು ಎಂದು ತಿಳಿಸಿದರು.
ಅಂದು ಬೆಳಗ್ಗೆ 9 ಗಂಟೆಗೆ ನಗರದ ಬಸವೇಶ್ವರ ವೃತ್ತದಿಂದ ನಡೆಯುವ ಮೆರವಣಿಗೆಯ ಮಾರ್ಗದಲ್ಲಿ ಶುಚಿತ್ವ ಕಾಯ್ದುಕೊಳ್ಳಬೇಕು. ನಗರದ ಪ್ರಮುಖ ವೃತ್ತಗಳಲ್ಲಿ ದೀಪಾಲಂಕಾರ ಮಾಡಬೇಕು. ಎಲ್ಲ ಸರಕಾರಿ ಕಚೇರಿಗಳಲ್ಲಿ, ಶಾಲಾ-ಕಾಲೇಜುಗಳಲ್ಲಿ ಕಡ್ಡಾಯವಾಗಿ ಜಯಂತಿ ಆಚರಿಸಬೇಕು ಎಂದು ಸೂಚನೆ ನೀಡಿದರು.
ವೇದಿಕೆಯ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕ್ಕೆ ಏರ್ಪಾಡು ಮಾಡಬೇಕು. ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡುವುದರ ಜತೆಗೆ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡಬೇಕೆಂದು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಉತ್ತರಾದೇವಿ, ಯುವಜನ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವೀರೇಶ ನಾಯಕ, ಸಮಾಜದ ಮುಖಂಡರಾದ ಚಂದ್ರಶೇಖರ ಪಾಟೀಲ ಮಿರ್ಜಾಪುರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್