ನವೆಂಬರ್ ಕ್ರಾಂತಿ : ನಿರ್ಲಕ್ಷಿಸಿ-ಸಿದ್ದರಾಮಯ್ಯ
ಮೈಸೂರು, 17 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕ್ರಾಂತಿ ಎಂದರೇನು, ಬದಲಾವಣೆ ಕ್ರಾಂತಿ ಅಲ್ಲ ಎಂದು ನವೆಂಬರ್ ಕ್ರಾಂತಿ ಬಗ್ಗೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾರು ಈ ಬಗ್ಗೆ ಹೇಳಿದರೂ ಮಾಧ್ಯಮದವರು ನಿರ್ಲಕ್ಷಿಸಬೇಕು ಎಂದರು. ಇದೇ ವೇಳೆ ಆರ್.ಎಸ್.ಎಸ್ ಚಟುವಟಿಕೆಗಳಿಗೆ
Cm


ಮೈಸೂರು, 17 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕ್ರಾಂತಿ ಎಂದರೇನು, ಬದಲಾವಣೆ ಕ್ರಾಂತಿ ಅಲ್ಲ ಎಂದು ನವೆಂಬರ್ ಕ್ರಾಂತಿ ಬಗ್ಗೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾರು ಈ ಬಗ್ಗೆ ಹೇಳಿದರೂ ಮಾಧ್ಯಮದವರು ನಿರ್ಲಕ್ಷಿಸಬೇಕು ಎಂದರು.

ಇದೇ ವೇಳೆ ಆರ್.ಎಸ್.ಎಸ್ ಚಟುವಟಿಕೆಗಳಿಗೆ ನಿರ್ಬಂಧ ಕುರಿತು ಮಾತನಾಡಿದ ಅವರು, ಶಾಲಾ ಆವರಣದಲ್ಲಿ ಸಂಘ ಸಂಸ್ಥೆಗಳ ಚಟುವಟಿಕೆಗಳಿಗೆ ನಿರ್ಬಂಧ ಹೇರುವ ಬಗ್ಗೆ 2013 ರಲ್ಲಿ ಜಗದೀಶ್ ಶೆಟ್ಟರ್ ಅವರು ಮುಖ್ಯಮಂತ್ರಿಗಳಿದ್ದ ಸಂದರ್ಭದಲ್ಲಿ ಸರ್ಕಾರಿ ಆದೇಶ ಹೊರಡಿಸಲಾಗಿದೆ, ಕೇವಲ ಆರ್.ಎಸ್.ಎಸ್ ಚಟುವಟಿಕೆಗಳಿಗೆ ಮಾತ್ರವಲ್ಲ ಎಲ್ಲಾ ಸಂಘ ಸಂಸ್ಥೆಗಳ ಚಟುವಟಿಕೆಗಳ ಮೇಲೂ ಸರ್ಕಾರಿ ಆದೇಶ ಅನ್ವಯವಾಗುತ್ತದೆ. ಸರ್ಕಾರಿ ಶಾಲೆ, ಆಟದ ಮೈದಾನ, ಸರ್ಕಾರಿ ಸ್ಥಳಗಳು, ಉದ್ಯಾನವನಗಳಲ್ಲಿ , ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗಿದೆ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande