ಪಲ್ಲಕ್ಕಿ ನಾನ್ ಎಸಿ ಸ್ಲೀಪರ್ ರಾತ್ರಿ ಸಾರಿಗೆ ಕಾರ್ಯಾಚರಣೆ : ಜಿಲ್ಲಾ ಉಸ್ತುವಾರಿ ಸಚಿವರಿಂದ ಉದ್ಘಾಟನೆ
ಗದಗ, 17 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲೆಯ ಸಾರ್ವಜನಿಕ ಪ್ರಯಾಣಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕ ರಾ ರ ಸಾ ಸಂಸ್ಥೆ ಬೆಂಗಳೂರು ಕೇಂದ್ರ ವಿಭಾಗದಿಂದ ಬೆಂಗಳೂರು-ಗದಗ ವ್ಹಾಯಾ ತುಮಕೂರು, ಚಿತ್ರದುರ್ಗ, ದಾವಣಗೆರೆ, ಹರಿಹರ, ರಾಣೆಬೆನ್ನೂರು, ಗುತ್ತಲ, ಶಿರಹಟ್ಟಿ ಮಾರ್ಗವಾಗಿ ಪ್ರತಿಷ್ಠಿ
ಪೋಟೋ


ಗದಗ, 17 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲೆಯ ಸಾರ್ವಜನಿಕ ಪ್ರಯಾಣಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕ ರಾ ರ ಸಾ ಸಂಸ್ಥೆ ಬೆಂಗಳೂರು ಕೇಂದ್ರ ವಿಭಾಗದಿಂದ ಬೆಂಗಳೂರು-ಗದಗ ವ್ಹಾಯಾ ತುಮಕೂರು, ಚಿತ್ರದುರ್ಗ, ದಾವಣಗೆರೆ, ಹರಿಹರ, ರಾಣೆಬೆನ್ನೂರು, ಗುತ್ತಲ, ಶಿರಹಟ್ಟಿ ಮಾರ್ಗವಾಗಿ ಪ್ರತಿಷ್ಠಿತ ಪಲ್ಲಕ್ಕಿ ನಾನ್ ಎಸಿ ಸ್ಲೀಪರ್ ರಾತ್ರಿ ಸಾರಿಗೆ ಕಾರ್ಯಾಚರಣೆಯನ್ನು ದಿ: 17-10-2025 ರಿಂದ ಆರಂಭಿಸಾಲಾಗುತ್ತಿದೆ.

ಸದರ ಸಾರಿಗೆಯನ್ನು ದಿ: 18-10-2025 ರಂದು ಸಮಯ ರಾತ್ರಿ 10:00 ಘಂಟೆಗೆ ಗದಗ ಪಂಡಿತ ಪುಟ್ಟರಾಜ ಗವಾಯಿ ಬಸ್ ನಿಲ್ದಾಣದಲ್ಲಿ ಕಾನೂನು,ನ್ಯಾಯ,ಮಾನವ ಹಕ್ಕುಗಳು, ಸಂಸದಿಯ ವ್ಯವಹಾರಗಳು, ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್ ಕೆ ಪಾಟೀಲ ಉದ್ಘಾಟಿಸಲಿದ್ದಾರೆ. ಸಾರ್ವಜನಿಕರು ಸದರಿ ಸಾರಿಗೆಯ ಸೌಲಭ್ಯ ಸದುಪಯೋಗಪಡಿಸಿಕೊಳ್ಳಬೇಕೆಂದು ವಾ.ಕ.ರ.ಸಾ.ಸಂಸ್ಥೆಗದಗ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande