ರಾಯಚೂರು, 17 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ 2025-26ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ ರೈತರಿಂದ ಬಿಳಿಜೋಳವನ್ನು ನೋಂದಣಿ ಹಾಗೂ ಖರೀದಿಸುವುದಕ್ಕೆ ಸರ್ಕಾರದ ನಡವಳಿಗಳಲ್ಲಿನ ಮಾರ್ಗಸೂಚಿಗಳನ್ವಯ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕಾಗಿದೆ.
ಈ ವಿಷಯದ ಬಗ್ಗೆ ಚರ್ಚಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 28ರ ಬೆಳಿಗ್ಗೆ 11ಗಂಟೆಗೆ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು, ಈ ಸಭೆಗೆ ಸಂಬAಧಿಸಿದ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಕಡ್ಡಾಯವಾಗಿ ಹಾಜರಾಗುವಂತೆ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿಯ ಅಧ್ಯಕ್ಷರಾದ ನಿತೀಶ್ ಕೆ. ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್