ಹಾವೇರಿ, 17 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ರಾಜ್ಯ ಸರ್ಕಾರದ ಬೇಜವಾಬ್ದಾರಿ ತನದಿಂದ ಪ್ರತಿಷ್ಠಿತ ಗೂಗಲ್ ಕಂಪನಿ ನಮ್ಮ ರಾಜ್ಯಬಿಟ್ಟು ಆಂಧ್ರಪ್ರದೇಶಕ್ಕೆ ಹೋಗುವಂತಾಗಿದೆ. ಸರ್ಕಾರ ಪ್ರಗತಿಪರವಾಗಿದ್ದರೆ ನಮ್ಮ ರಾಜ್ಯ ಬಿಟ್ಟು ಯೋಜನೆಗಳು ಹೋಗುವುದಿಲ್ಲ. ಈಗಿನ ಸರ್ಕಾರ ನೀವು ಹೋಗುವುದಿದ್ದರೆ ಹೋಗಿ ಅಂತ ಬೇಜವಾಬ್ದಾರಿ ತೋರುತ್ತಿರುವುದರಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.
ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರತಿಷ್ಠಿತ ಸಂಸ್ಥೆ ಅಮೇರಿಕಾದ ಹೊರಗಡೆ 1.23 ಲಕ್ಷ ಕೋಟಿ ಬಂಡವಾಳ ಹೂಡುವ ಸಂಸ್ಥೆ ರಾಜ್ಯಕ್ಕೆ ಬರಬೇಕಿತ್ತು ಅದು ಬರದಿರುವುದು ದುರ್ದೈವದ ಸಂಗತಿ, ಕಾರಣ ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆ, ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಎಲ್ಲದಕ್ಕೂ ದರ ಪಟ್ಟಿ ಸಿದ್ದವಾಗಿದೆ. ಮೂಲ ಸೌಕರ್ಯ ಕುಸಿದು ಬಿದ್ದಿದೆ. ಇಲ್ಲಿ ಸಾಮಾಜಿಕವಾಗಿ ಶಾಂತಿ ಸುವ್ಯವಸ್ಥೆ ಹದಗೆಟ್ಟಿದೆ. ಅಪರಾಧ ಪ್ರಕರಣ ಹೆಚ್ಚಾಗಿದೆ ಹೀಗಾಗಿ ಆಂಧ್ರದಲ್ಲಿ ಅಷ್ಡೊಂದು ಮಾನವ ಸಂಪನ್ಮೂಲ ಅವಕಾಶ ಇಲ್ಲದಿದ್ದರೂ ಆ ಸಂಸ್ಥೆ ಆಂದ್ರಪ್ರದೇಶದ ಕ್ಕೆ ಹೋಯಿತು. ನಾವಿದ್ದಾಗ ಪಾಸ್ಕಾನ್ ಕಂಪನಿ ಬಂದಾಗ ಆಂಧ್ರ ಪ್ರದೇಶ, ತಮಿಳುನಾಡು ತಮ್ಮ ರಾಜ್ಯಕ್ಕೆ ತೆಗೆದುಕೊಂಡು ಹೋಗಲು ಪ್ರಯತ್ನಿಸಿದ್ದರು. ನಾವು ಎಲ್ಲ ರೀತಿಯ ಸೌಕರ್ಯ ಕೊಟ್ಟು ಅದನ್ನು ಉಳಿಸಿಕೊಂಡಿದ್ದೇವು. ಅದು ಸುಮಾರು ಒಂದು ಲಕ್ಷ ಕೋಟಿ ಬಂಡವಾಳ ಹೂಡಿದೆ. ಈಗಾಗಲೇ 30 ಸಾವಿರ ಜನ ಉದ್ಯೋಗ ಪಡೆದಿದ್ದಾರೆ. ಸರ್ಕಾರ ಪ್ರಗತಿಪರವಾಗಿದ್ದರೆ ನಮ್ಮ ರಾಜ್ಯ ಬಿಟ್ಟು ಯೋಜನೆಗಳು ಹೋಗುವುದಿಲ್ಲ. ಈಗಿನ ಸರ್ಕಾರ ನೀವು ಹೋಗೊದಿದ್ದರೆ ಹೋಗಿ ಅಂತ ಬೇಜವಾಬ್ದಾರಿಯಿಂದ ಮಾತನಾಡುವುದು. ಸಿಎಂ ಹಾಗೂ ಸಚಿವರು ಇದರ ಬಗ್ಗೆ ತಲೆ ಕೆಡಸಿಕೊಳ್ಳದಿರುವುದು ದುರ್ದೈವ ಎಂದು ಬೇಸರ ವ್ಯಕ್ತಪಡಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa