ಸರಕಾರದ ವೈಫಲ್ಯ ಮುಚ್ಚಿಕೊಳ್ಳಲು ಸಂಘಕ್ಕೆ ಅಂಕುಶ : ಬೊಮ್ಮಾಯಿ
ಹಾವೇರಿ, 17 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ಸರ್ಕಾರ ನಿಷೇಧ ಹೇರಿರುವ ಕುರಿತು ಹಾವೇರಿಯಲ್ಲಿ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌, ಆರ್ ಎಸ್ ಎಸ್ ನೂರು ವರ್ಷ ಪೂರೈಸಿದ ಸಂದರ್ಭದಲ್ಲಿ ಎಲ್ಲ ನಗರ ಪ್ರದೇಶದಲ್ಲಿ ದೊಡ್ಡ ಪ್ರಮಾಣದ
Bommai


ಹಾವೇರಿ, 17 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ಸರ್ಕಾರ ನಿಷೇಧ ಹೇರಿರುವ ಕುರಿತು ಹಾವೇರಿಯಲ್ಲಿ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌, ಆರ್ ಎಸ್ ಎಸ್ ನೂರು ವರ್ಷ ಪೂರೈಸಿದ ಸಂದರ್ಭದಲ್ಲಿ ಎಲ್ಲ ನಗರ ಪ್ರದೇಶದಲ್ಲಿ ದೊಡ್ಡ ಪ್ರಮಾಣದಲ್ಲಿ ಸ್ವಯಂ ಸೇವಕರು ಸೇರುತ್ತಿದ್ದಾರೆ ಇದರಿಂದ ಸರಕಾರ ವಿಚಲಿತವಾಗಿದೆ ಎಂದಿದ್ದಾರೆ.

ಕಾಂಗ್ರೆಸ್ ಯಾವಾಗಲೂ ಅಲ್ಪ ಸಂಖ್ಯಾತ ಆಧಾರಿತ ರಾಜಕಾರಣ ಮಾಡುತ್ತಿದೆ. ಪಿಎಫ್ ಐ, ಎಸ್ ಡಿಪಿಐ ಅವರು ಕೂಡ ಈ ಥರದ ಚಟುವಟಿಕೆ ಮಾಡುತ್ತಾರೆ. ಕಾನೂನು ವಿರುದ್ದ ಕೆಲಸ ಮಾಡುತ್ತಾರೆ. ಕೆಜೆ ಹಳ್ಳಿ ಡಿಜೆ ಹಳ್ಲಿಯಲ್ಲಿ ಪೊಲಿಸ್ ಠಾಣೆ ಮೇಲೆ ದಾಳಿ ಮಾಡಿದಾಗ ನಾವು ಹತೋಟಿಗೆ ತಂದು ಮುನ್ನೂರು ಜನರನ್ನು ಬಂಧಿಸಲಾಯಿತು. ಆ ಎಲ್ಲ ಸಮಾಜ ಘಾತಕ ಶಕ್ತಿಗಳಿಗೆ ರಕ್ಷಣೆ ಕೊಡಲು ಸರ್ಕಾರ ಈ ಕೆಲಸ ಮಾಡುತ್ತಿದೆ ಅದನ್ನು ಮರೆ ಮಾಚಲು ಆರ್ ಎಸ್ ಎಸ್ ಮೇಲೆ ದಾಳಿ ಮಾಡುತ್ತಿದ್ದಾರೆ ಆರ್ ಎಸ್ ಎಸ್ ಯಾವಾಗಲೂ ಬಗ್ಗಿಲ್ಲ ಇದೆಲ್ಲ ನೋಡಿದರೆ ಮತ್ತೆ ಎಮರ್ಜೆನ್ಸಿ ಬರುತ್ತಿದೆ ಎನಿಸುತ್ತಿದೆ‌. ಸರ್ಕಾರಿ ಶಾಲೆಗಳ ಆಟದ ಮೈದಾನದಲ್ಲಿ ಮಕ್ಕಳು ಆಟವಾಡುತ್ತಾರೆ, ರಕ್ಷಣಾ ವೇದಿಕೆ ಕನ್ನಡ ಸಂಘಟನೆಗಳು ಕಾರ್ಯಕ್ರಮ ಮಾಡುತ್ತಾರೆ. ಅವರೆಲ್ಲ ಅನುಮತಿ ಪಡೆಯಬೇಕಾಗುತ್ತದೆ. ಸಂಘದವರು ಶೇ 70% ರಷ್ಟು ಖಾಸಗಿ ಸ್ಥಳದಲ್ಲಿ ಶಾಖೆ ನಡೆಸುತ್ತಾರೆ. ಶೇ 30% ರಷ್ಟು ಮಾತ್ರ ಸರ್ಕಾರಿ ಜಾಗದಲ್ಲಿ ನಡೆಯುತ್ತದೆ. ಅದನ್ನು ತಡೆಯಲು ಈ ಸರ್ಕಾರ ಮುಂದಾಗಿದೆ. ಈ ಸರ್ಕಾರ ಬಂದ ಮೇಲೆ ಜಾತಿ ಜಾತಿ ನಡುವೆ ಗದ್ದಲ ಉಂಟುಮಾಡುತ್ತಿದೆ. ಗಣತಿ ಹೆಸರಲ್ಲಿ ಜಾತಿ ಮಾಡುತ್ತಿದೆ‌. ಸಮಾಜವಾದಿ ಎಂದು ಹೇಳುವ ಸಿದ್ದರಾಮಯ್ಯ ಜಾತಿವಾದಿ ಮುಖ್ಯಮಂತ್ರಿ ಆಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಕರ್ನಾಟಕದ ಸಾಮರಸ್ಯದ ವಾತಾವರಣ ಹಾಳು ಮಾಡಿದ್ದಾರೆ.. ತಮ್ಮ ವೈಫಲ್ಯ ಮುಚ್ಚಿಕೊಳ್ಳಲು, ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳು ಈ ರೀತಿ ಮಾಡುತ್ತಿದ್ದಾರೆ. ಇವತ್ತೆ ಚುನಾವಣೆ ನಡೆದರೆ ಕಾಂಗ್ರೆಸ್ 25 ಸ್ಥಾನ ಗೆಲ್ಲುವುದು ಕಷ್ಟ ಎಂದು ವಾಗ್ದಾಳಿ ನಡೆಸಿದರು‌.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande