ಕೊಪ್ಪಳ, 17 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಸರ್ಕಾರಿ ಸಂಘದ ಮಹಿಳಾ ಜಿಲ್ಲಾ ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು ಮಹಿಳಾ ನೌಕರರಿಗೆ ಒಂದು ದಿನ ಮುಟ್ಟಿನ ರಜೆ ಘೋಷಣೆ ಮಾಡಿದ್ದಕ್ಕಾಗಿ ಸಚಿವ ಸಂತೋಷ್ ಎಸ್. ಲಾಡ್ ಅವರಿಗೆ ಗೌರವ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ಸಂಘದ ಮಹಿಳಾ ನೌಕರ ಸಂಘದ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷೆ ಮಹಾಲಕ್ಷ್ಮೀ ಪಿ.ಆರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ನಪೂರ್ಣ ಹಾಗೂ ಕೊಪ್ಪಳ ಜಿಲ್ಲಾ ಸರ್ಕಾರಿ ಮಹಿಳಾ ನೌಕರರ ಸರ್ವ ಸದಸ್ಯರು ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್